ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ತಾಲೂಕಿನ 39 ಗ್ರಾಮ ಪಂಚಾಯ್ತಿಗಳಿಗೆ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿಯನ್ನು ಪ್ರಕಟಿಸಲಾಗಿದ್ದು, ಜಿಲ್ಲಾಧಿಕಾರಿಗಳು ಈ ಕುರಿತಂತೆ ಆದೇಶ ಹೊರಡಿಸಿದ್ದಾರೆ.
ಶ್ರೀ ವೆಂಕಟೇಶ್ವರ ಚಿತ್ರ ಮಂದಿರದಲ್ಲಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ನೇತೃತ್ವದಲ್ಲಿ ಮೀಸಲಾತಿ ನಿಗದಿ ಸಭೆ ನಡೆದಿದ್ದು, ಪಟ್ಟಿ ಪ್ರಕಟಿಸಲಾಯಿತು.
ಅರಕೆರೆ ಅಧ್ಯಕ್ಷ ’ಎ’ ವರ್ಗಕ್ಕೆ, ಉಪಾಧ್ಯಕ್ಷ ಸಾಮಾನ್ಯ ಮಹಿಳೆ, ದೊಣಬಘಟ್ಟ ಅಧ್ಯಕ್ಷ ’ಎ’ ವರ್ಗಕ್ಕೆ, ಉಪಾಧ್ಯಕ್ಷ ಎಸ್.ಸಿ ಮಹಿಳೆ, ಕಲ್ಲಹಳ್ಳಿ ಅಧ್ಯಕ್ಷ ’ಎ’ ವರ್ಗಕ್ಕೆ, ಉಪಾಧ್ಯಕ್ಷ ಸಾಮಾನ್ಯ, ಯರೇಹಳ್ಳಿ ಅಧ್ಯಕ್ಷ ’ಎ’ ವರ್ಗಕ್ಕೆ, ಉಪಾಧ್ಯಕ್ಷ ಸಾಮಾನ್ಯ ಮಹಿಳೆ, ಸೈದರಕಲ್ಲಹಳ್ಳಿ ಅಧ್ಯಕ್ಷ ’ಎ’ ವರ್ಗ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ, ಸಿದ್ಲೀಪುರ ಅಧ್ಯಕ್ಷ ’ಎ’ವರ್ಗ ಮಹಿಳೆ, ಉಪಾಧ್ಯಕ್ಷ ಪರಿಶಿಷ್ಟ ಜಾತಿ, ಮಾರಶೆಟ್ಟಿಹಳ್ಳಿ ಅಧ್ಯಕ್ಷ ’ಎ’ ವರ್ಗ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ, ತಡಸ ಅಧ್ಯಕ್ಷ ’ಎ’ವರ್ಗ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ, ಕಾಗೇಕೋಡಮಗ್ಗಿ ಅಧ್ಯಕ್ಷ ’ಎ’ ವರ್ಗ ಮಹಿಳೆ, ಉಪಾಧ್ಯಕ್ಷ ’ಬಿ’ ವರ್ಗ ಮಹಿಳೆಗೆ ಘೋಷಿಸಲಾಗಿದೆ.
ಇನ್ನು, ದಾಸರಕಲ್ಲಹಳ್ಳಿ ಅಧ್ಯಕ್ಷ ’ಬಿ’ ವರ್ಗ, ಉಪಾಧ್ಯಕ್ಷ ’ಎ’ ವರ್ಗ ಮಹಿಳೆ, ಬಾರಂದೂರು ಅಧ್ಯಕ್ಷ ’ಬಿ’ವರ್ಗ ಮಹಿಳೆ, ಉಪಾಧ್ಯಕ್ಷ ’ಎ’ ವರ್ಗ ಮಹಿಳೆ, ಗುಡಮಘಟ್ಟ ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ಸಾಮಾನ್ಯ ಮಹಿಳೆ, ಆಗರದಹಳ್ಳಿ ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ಸಾಮಾನ್ಯ ಮಹಿಳೆ, ಯಡೇಹಳ್ಳಿ ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ಸಾಮಾನ್ಯ ಮಹಿಳೆ, ಅರಹತೊಳಲು ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ಪರಿಶಿಷ್ಟ ಜಾತಿ ಮಹಿಳೆ, ಕಲ್ಲಿಹಾಳ್ ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ಪರಿಶಿಷ್ಟ ಜಾತಿ ಮಹಿಳೆ, ಅರಬಿಳಚಿ ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ.
ವೀರಾಪುರ ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ’ಬಿ’ವರ್ಗ, ದೊಡ್ಡೇರಿ ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ಪರಿಶಿಷ್ಟ ಜಾತಿ ಮಹಿಳೆ, ಮಾವಿನಕೆರೆ ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ’ಎ’ ವರ್ಗ ಮಹಿಳೆ, ಅರಳಿಕೊಪ್ಪ ಸಾಮಾನ್ಯ, ಉಪಾಧ್ಯಕ್ಷ ಸಾಮಾನ್ಯ ಮಹಿಳೆ, ತಾವರಘಟ್ಟ ಅಧ್ಯಕ್ಷ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ ಮಹಿಳೆ, ಆನವೇರಿ ಅಧ್ಯಕ್ಷ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ’ಎ’ ವರ್ಗ, ಮಂಗೋಟೆ ಅಧ್ಯಕ್ಷ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಪರಿಶಿಷ್ಟ ಜಾತಿ, ನಾಗತಿಬೆಳಗಲು ಅಧ್ಯಕ್ಷ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ, ಕೂಡ್ಲಿಗೆರೆ ಅಧ್ಯಕ್ಷ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ, ಕೊಮಾರನಹಳ್ಳಿ ಅಧ್ಯಕ್ಷ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ, ಅರಳಿಹಳ್ಳಿ ಅಧ್ಯಕ್ಷ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ’ಎ’ ವರ್ಗ, ಅಂತರಗಂಗೆ ಅಧ್ಯಕ್ಷ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ’ಎ’ವರ್ಗ, ಕಂಬದಾಳ್ ಹೊಸೂರು ಅಧ್ಯಕ್ಷ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಪರಿಶಿಷ್ಟ ಪಂಗಡ ಮಹಿಳೆ, ಮೈದೊಳಲು ಅಧ್ಯಕ್ಷ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಪರಿಶಿಷ್ಟ ಜಾತಿ, ಸನ್ಯಾಸಿಕೋಡಮಗ್ಗೆ ಅಧ್ಯಕ್ಷ ಪರಿಶಿಷ್ಟ ಜಾತಿ, ಉಪಾಧ್ಯಕ್ಷ ’ಎ’ವರ್ಗ ಮಹಿಳೆ, ಹನುಮಂತಪುರ ಅಧ್ಯಕ್ಷ ಪರಿಶಿಷ್ಟ ಜಾತಿ, ಉಪಾಧ್ಯಕ್ಷ ’ಎ’ ವರ್ಗ ಮಹಿಳೆ, ಸಿಂಗನಮನೆ ಅಧ್ಯಕ್ಷ ಪರಿಶಿಷ್ಟ ಜಾತಿ, ಉಪಾಧ್ಯಕ್ಷ ಸಾಮಾನ್ಯ ಮಹಿಳೆ, ನಿಂಬೆಗೊಂದಿ ಅಧ್ಯಕ್ಷ ಪರಿಶಿಷ್ಟ ಜಾತಿ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ, ಅತ್ತಿಗುಂದ ಅಧ್ಯಕ್ಷ ಪರಿಶಿಷ್ಟ ಜಾತಿ ಮಹಿಳೆ, ಉಪಾಧ್ಯಕ್ಷ ’ಎ’ ವರ್ಗ, ಬಿಳಿಕಿ ಅಧ್ಯಕ್ಷ ಪರಿಶಿಷ್ಟ ಜಾತಿ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ, ಕಾರೇಹಳ್ಳಿ ಅಧ್ಯಕ್ಷ ಪರಿಶಿಷ್ಟ ಜಾತಿ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ ಮತ್ತು ಹಿರಿಯೂರು ಅಧ್ಯಕ್ಷ ಪರಿಶಿಷ್ಟ ಪಂಗಡ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ ಘೋಷಿಸಲಾಗಿದೆ.
ತಾಲೂಕಿನ ಒಟ್ಟು 41 ಗ್ರಾಮ ಪಂಚಾಯಿತಿಗಳ ಪೈಕಿ ಕಳೆದ ತಿಂಗಳು ಡಿಸೆಂಬರ್‌ನಲ್ಲಿ 35 ಪಂಚಾಯಿತಿಗಳಿಗೆ ಮಾತ್ರ ಚುನಾವಣೆ ನಡೆಸಲಾಯಿತು.
ಹಿರಿಯ ಅಧಿಕಾರಿ ವೆಂಕಟೇಶ್ ಬನಕಟ್ಟಿ, ತಹಸೀಲ್ದಾರ್ ಜಿ. ಸಂತೋಷ್ ಕುಮಾರ್ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post