ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನಗರ ಹಾಗೂ ಗ್ರಾಮಾಂತರ ಭಾಗಗಳಲ್ಲಿ ಮಳೆಯಿಂದ ಉಂಟಾದ ಹಾನಿಗೆ ಸರ್ಕಾರ ನಿಗದಿಪಡಿಸಿರುವ ಪರಿಹಾರ ಧನವನ್ನು ಸಂತ್ರಸ್ಥರಿಗೆ ತಕ್ಷಣ ನೀಡಬೇಕು. ಈ ನಿಟ್ಟಿನಲ್ಲಿ ತಹಸೀಲ್ದಾರ್‌ರವರು ಹೆಚ್ಚಿನ ಗಮನ ನೀಡಬೇಕು. ಅಲ್ಲದೆ ಮಳೆಯಿಂದ ಉಂಟಾಗುವ ಸಮಸ್ಯೆಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು ಎಂದು ಶಾಸಕ ಸಂಗಮೇಶ್ವರ್ MLA Sangameshwar ಅಧಿಕಾರಿಗಳಿಗೆ ಸೂಚಿಸಿದರು.
ಭದ್ರಾ ನದಿಯಿಂದ ಉಂಟಾದ ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಿ ಸಂತ್ರಸ್ಥರ ಸಂಕಷ್ಟಗಳನ್ನು ಆಲಿಸಿ ಮಾತನಾಡಿದ ಅವರು, ಕವಲಗುಂದಿಯಿಂದ ತರೀಕೆರೆ ರಸ್ತೆಯ ಖಬರ್‌ಸ್ತಾನದವರೆಗೆ ತಡೆಗೋಡೆ ನಿರ್ಮಿಸುವಂತೆ 138 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಲಾಗಿದ್ದು, ಕೇವಲ 8 ಕೋಟಿ ರೂ. ಮಾತ್ರ ಬಿಡುಗಡೆ ಮಾಡಲಾಗಿದೆ. ಈ ಹಣದಲ್ಲಿಯೇ ಇದೀಗ ಎರಡು ಭಾಗಗಳಲ್ಲಿ ಸ್ವಲ್ಪ ಸ್ವಲ್ಪ ತಡೆಗೋಡೆ ನಿರ್ಮಿಸುವಂತೆ ಸೂಚಿಸಲಾಗಿದೆ. ಮುಂದಿನ ದಿನಗಳಲ್ಲಿ ತಗ್ಗು ಪ್ರದೇಶಗಳಲ್ಲಿ ತಡೆಗೋಡೆ ನಿರ್ಮಾಣಗೊಳ್ಳಲಿದೆ ಎಂದರು.
ಪ್ರತಿ ವರ್ಷ ಮುಳುಗಡೆಗೊಳ್ಳುತ್ತಿರುವ ಹೊಸಸೇತುವೆಗೆ ಪರ್ಯಾಯವಾಗಿ ಮತ್ತೊಂದು ಸೇತುವೆ ಮಂಜೂರಾತಿಯಾಗಿದ್ದು, ಶೀಘ್ರದಲ್ಲಿಯೇ ಟೆಂಡರ್ ಪ್ರಕ್ರಿಯೆ ಆರಂಭಗೊಳ್ಳಲಿದೆ ಎಂದರು.
Also read: ನ್ಯಾಮತಿಯಲ್ಲಿ ಗುರುಪೂರ್ಣಿಮಾ ಮಹೋತ್ಸವವು ಭಾವಪೂರ್ಣ ವಾತಾವರಣದಲ್ಲಿ ಸಂಪನ್ನ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post