ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನಾಡಿನೆಲ್ಲೆಡೆ ದಾಸಶ್ರೇಷ್ಠರಾದ ಪುರಂದರ ದಾಸರ ಆರಾಧನಾ ಮಹೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು, ನಗರದಲ್ಲೂ ಸಹ ಇದು ಸಂಪನ್ನಗೊಂಡಿತು.
ಹರಿದಾಸ ಮಹಿಳಾ ಮಂಡಳಿ ವತಿಯಿಂದ 40ನೆಯ ವರ್ಷದ ಆಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಗಿದ್ದು, ನಗರ ಸಂಕೀರ್ತನೆ ನಡೆಯಿತು.
ಆರಾಧನೆ ಅಂಗವಾಗಿ ಬೆಳಗ್ಗೆ 6 ಗಂಟೆಗೆ ಪಂಚಾಮೃತ ಅಭಿಷೇಕ ಹಾಗೂ 9 ಗಂಟೆಗೆ ರಾಘವೇಂದ್ರ ಸ್ವಾಮಿ ಮಠದಿಂದ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದವರೆಗೆ ಎಲ್ಲಾ ಭಜನಾ ಮಂಡಳಿಯಿAದ ನಗರ ಸಂಕೀರ್ತನ ಕಾರ್ಯಕ್ರಮ ನಡೆಯಿತು.
Also read: ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮದಲ್ಲಿ ಅಧ್ವಾನ: ಇಷ್ಟಕ್ಕೂ ಆಗಿದ್ದೇನು?
ನಂತರ ಶ್ರೀಮಠದಲ್ಲಿ ಪುರಂದರದಾಸರ ಬಗ್ಗೆ ಪ್ರವಚನ ಏರ್ಪಡಿಸಲಾಗಿತ್ತು. ಆನಂತರ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ನಡೆಯಿತು.
ಹರಿದಾಸ ಮಹಿಳಾ ಮಂಡಳಿಯ ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳು ಹಾಗೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post