ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ತಾಲೂಕಿನ ಶಂಕರಘಟ್ಟ ಗ್ರಾಮದ ಮನೆಯೊಂದರ ಮೇಲೆ ಗ್ರಾಮಾಂತರ ಠಾಣೆ ಪೊಲೀಸರು ದಿಢೀರ್ ದಾಳಿ ನಡೆಸಿ, ಪರವಾನಿಗೆ ಇಲ್ಲದೆ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಂದೂಕುಗಳನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದೆ.
ಪಾಲಾಕ್ಷಪ್ಪ (47) ಎಂಬುವರ ಮನೆಯಲ್ಲಿ ನಾಡಬಂದೂಕುಗಳನ್ನು ಅಕ್ರಮವಾಗಿ ಇಟ್ಟುಕೊಂಡು ದುರಸ್ಥಿ ಮಾಡಲಾಗುತ್ತದೆ ಎಂಬ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿ, 9 ನಾಡಬಂದೂಕುಗಳನ್ನು ವಶಪಡಿಕೊಳ್ಳಲಾಗಿದೆ. ಹಾಗೂ ಆರೋಪಿಯ ವಿರುದ್ಧ ಆಯುಧ ಕಾಯ್ದೆ ರೀತ್ಯ ಪ್ರಕರಣ ದಾಖಲಿಸಲಾಗಿದೆ.
Also read: ಚಳ್ಳಕೆರೆ ಶಾಸಕ ರಘುಮೂರ್ತಿ ಕಾರು ಅಪಘಾತ: ಪ್ರಾಣಾಪಾಯದಿಂದ ಪಾರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post