ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಪ್ರತಿ ವಿದ್ಯಾರ್ಥಿಯೂ ತಮ್ಮ ತಂದೆ ತಾಯಿಯರ ಶ್ರಮ ಹಾಗೂ ತ್ಯಾಗವನ್ನು ಅರಿತು ಸಮಗ್ರ ಅಧ್ಯಯನ ಮಾಡಿ ಶೈಕ್ಷಣಿಕ ಸಾಧನೆ ಮಾಡಬೇಕು ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ MLA BKSangameshwar ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಶಾಂತಿನಗರ ಗ್ರಾಮದ ಬಿಜಿಎಸ್ ಶಾಲಾ ಕಟ್ಟಡ ಉದ್ಘಾಟನೆ ಹಾಗೂ ಬಿಜಿಎಸ್ ಹಬ್ಬ ಎಂಬ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

Also read: ಮಕ್ಕಳ ಮುಂದೆಯೇ ಪತ್ನಿಯನ್ನು ಇರಿದು ಕೊಂದು, ತಾನೂ ಮಹಡಿಯಿಂದ ಜಿಗಿದ ಪತಿ
ಆದಿಚುಂಚನಗಿರಿ ಮಠದ ಶ್ರೀನಿರ್ಮಲಾನಂದನಾಥ ಸ್ವಾಮೀಜಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ, ಜಿಲ್ಲಾ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಗೌಡ ಇದ್ದರು.

ಆದಿಚುಂಚನಗಿರಿ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಭೇಟಿಯಾದ ಶಾಸಕ ಬಿ.ಕೆ. ಸಂಗಮೇಶ್ವರ್ ವಿಐಎಸ್’ಎಲ್ ಕಾರ್ಖಾನೆ ಕುರಿತಾಗಿ ಚರ್ಚೆ ನಡೆಸಿದರು.
ಭದ್ರಾವತಿಯ ಜೀವನಾಡಿಯಾಗಿರುವ ವಿಐಎಸ್’ಎಲ್ ಕಾರ್ಖಾನೆಯನ್ನು ಉಳಿಸುವುದು ಅತ್ಯಂತ ತುರ್ತು ಅವಶ್ಯತೆಯಾಗಿದೆ. ಹೀಗಾಗಿ, ಕಾರ್ಖಾನೆಯನ್ನು ಉಳಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಯುವ ನಾಯಕ ಗಣೇಶ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಗೌಡ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post