ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಜಿಲ್ಲೆಯ ಅವಧಿ ಮುಗಿದಿರುವ ಭದ್ರಾವತಿ ನಗರಸಭೆ ಮತ್ತು ತೀರ್ಥಹಳ್ಳಿ ಪಟ್ಟಣಪಂಚಾಯತಿ ಸಾರ್ವತ್ರಿಕ ಚುನಾವಣೆಯನ್ನು ಏಪ್ರಿಲ್ 29ರಂದು ನಡೆಸಲು ಉದ್ದೇಶಿಸಿದ್ದು, ಇಂದು ಜಿಲ್ಲಾಧಿಕಾರಿಗಳು ವೇಳಾಪಟ್ಟಿಯನ್ನು ಹೊರಡಿಸಿದ್ದಾರೆ.
ಚುನಾವಣೆಗೆ ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕ ಏ.15, ನಾಮಪತ್ರ ಪರಿಶೀಲಿಸುವ ದಿನಾಂಕ ಏ.16, ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕ ಏ.-19 ಆಗಿರುತ್ತದೆ. ಏಪ್ರಿಲ್ 27 ರಂದು ಬೆಳಿಗ್ಗೆ 7ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದ್ದು, ಏ.30ರಂದು ಬೆಳಿಗ್ಗೆ 8ರಿಂದ ತಾಲೂಕು ಕೇಂದ್ರ ಸ್ಥಳದಲ್ಲಿ ಮತ ಎಣಿಕೆ ನಡೆಯಲಿದೆ. ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಳಿಸುವ ದಿನಾಂಕ ಏ.30 ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















