ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನಗರದ ವಿಐಎಸ್‌ಎಲ್ ಸಿಲ್ವರ್ ಜ್ಯೂಬಿಲಿ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದ್ದ ಗಣರಾಜ್ಯೋತ್ಸವ Republic Day ಕಾರ್ಯಕ್ರಮದಲ್ಲಿ ಕಾರ್ಯಪಾಲಕ ನಿರ್ದೇಶಕ ಬಿ.ಎಲ್. ಚಂದ್ವಾನಿ ಧ್ವಜಾರೋಹಣ ನೆರವೇರಿಸಿದರು.
ಇದೇ ಸಂದರ್ಭದಲ್ಲಿ ವಿಐಎಸ್‌ಎಲ್ VISL ಉದ್ಯೋಗಿಗಳು ಕಳೆದ ವರ್ಷದಲ್ಲಿ ಮಾಡಿದ ವಿಶೇಷ ಸಾಧನೆಗಾಗಿ ವಿಶೇಷ ಪ್ರಶಸ್ತಿ, ಜವಹಾರ್, ನೆಹರು ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿಗಳನ್ನು ವಿತರಿಸಲಾಯಿತು.
ವಿಐಎಸ್‌ಎಲ್ ಸೆಕ್ಯುರಿಟಿ, ಎನ್.ಸಿ.ಸಿ, ಪ್ರೌಢ ಮತ್ತು ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಪಥಸಂಚಲನದಲ್ಲಿ ಭಾಗವಹಿಸಿದ್ದರು. ಬಾಲಭಾರತಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಸೈಂಟ್ ಚಾರ್ಲ್ಸ್ ಆಂಗ್ಲ ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಷ್ಟ್ರೀಯ ಏಕೀಕರಣ ಮತ್ತು ದೇಶಪ್ರೇಮ ವಿಷಯಗಳ ಕುರಿತು ವರ್ಣರಂಜಿತ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶಿಸಿದರು ಮತ್ತು ಸಮೂಹಗಾನ ಹಾಡಿದರು.
Also read: ವಿಜಯಪುರದಲ್ಲಿ 300 ಕೋಟಿ ವೆಚ್ಚದಲ್ಲಿ ಹೊಸ ಆಹಾರ ಸಂಸ್ಕರಣಾ ಘಟಕ ಸ್ಥಾಪನೆ
ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಎಲ್ಲಾ ಪಥಸಂಚಲನ ತಂಡಗಳಿಗೆ ಬಹುಮಾ ವಿತರಿಸಲಾಯಿತು. ವಿಐಎಸ್‌ಎಲ್ ಕಾರ್ಮಿಕರ ಮಕ್ಕಳಿಗಾಗಿ ಆಕ್ಸಿಸ್ ಬ್ಯಾಂಕ್ ಆಯೋಜಿಸಿದ್ದ ಪ್ರಬಂಧ ಮತ್ತು ಚಿತ್ರ ಬರೆಯುವ ಸ್ಪರ್ದೆಯಲ್ಲಿ ವಿಜೇತರಾದ ಮಕ್ಕಳಿಗೆ ಆಕ್ಸಿಸ್ ಬ್ಯಾಂಕಿನ ಭದ್ರಾವತಿ ಶಾಖೆಯ ಸಹಾಯಕ ಉಪಾಧ್ಯಕ್ಷರಾದ ಎಚ್.ಎಸ್.ಭಾಸ್ಕರ್, ವಿಐಎಸ್‌ಎಲ್‌ನ ಕಾರ್ಯಪಾಲಕ ನಿರ್ದೇಶಕ ಬಿ.ಎಲ್. ಚಂದ್ವಾನಿ ಮತ್ತು ಮಹಾಪ್ರಬಂಧಕರು (ಹಣಕಾಸು ಮತ್ತು ಲೆಕ್ಕ) ಶೋಭಾ ಶಿವಶಂಕರನ್‌ರವರು ಬಹುಮಾನವನ್ನು ವಿತರಿಸಿದರು.
ಕೇರಳದಲ್ಲಿ ನಡೆದ ಪ್ಯಾರಾ ಬ್ಯಾಡ್ಮಿಂಟನ್ ಡಬಲ್ ಸ್ಪರ್ದೆಯಲ್ಲಿ ಬಂಗಾರದ ಪದಕವನ್ನು ಗಳಿಸಿದ ಸಹಾಯಕ ಮಹಾಪ್ರಬಂಧಕರು (ಸಿ ಅಂಡ್ ಐಟಿ) ನಿತಿನ್ ಜೋಸ್ ಅವರನ್ನು ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ವಿಐಎಸ್‌ಎಲ್ ಕಾರ್ಮಿಕರ ಸಂಘ ಮತ್ತು ವಿಐಎಸ್‌ಎಲ್ ಅಧಿಕಾರಿಗಳ ಸಂಘ, ಕಾರ್ಯಕಾರಿ ಸಮಿತಿ ಸದಸ್ಯರು, ಇಸ್ಪಾತ್ ಮಹಿಳಾ ಸಮಾಜದ ಸದಸ್ಯರು, ಕಾರ್ಮಿಕರು, ಗುತ್ತಿಗೆ ಕಾರ್ಮಿಕರು, ಶಾಲಾ ಮಕ್ಕಳು, ಪೋಷಕರು, ಅಧ್ಯಾಪಕ ವೃಂದದವರು, ಭದ್ರಾವತಿಯ ನಾಗರೀಕರು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
.
Discussion about this post