ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಮುಖ್ಯಮಂತ್ರಿ ಸಿದ್ದರಾಮಯ್ಯರವರು #CM Siddaramaiah ಖುದ್ದಾಗಿ ಕ್ಷೇತ್ರದ ಶಾಸಕರ ಅಹವಾಲುಗಳನ್ನು ಸ್ವೀಕರಿಸುತ್ತಿದ್ದು, ಕರ್ನಾಟಕ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ. ಸಂಗಮೇಶ್ವರ್ #MLA B K Sangameshwar ಗುರುವಾರ ತಮ್ಮ ಅಹವಾಲುಗಳನ್ನು ಸಲ್ಲಿಸಿದರು.
ಶಿವಮೊಗ್ಗ ಜಿಲ್ಲಾ ಶಾಸಕರ ಸಭೆಯಲ್ಲಿ ಬಹುಮುಖ್ಯವಾಗಿ ಕ್ಷೇತ್ರದ ಮೈಸೂರು ಕಾಗದ ಕಾರ್ಖಾನೆ ಪುನರ್ ಆರಂಭಿಸುವಂತೆ ಶಾಸಕರು ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದ್ದಾರೆ. ಕ್ಷೇತ್ರದಲ್ಲಿ ಕಾರ್ಮಿಕರು ಹೆಚ್ಚಾಗಿದ್ದು, ಎಂಪಿಎಂ ಮತ್ತು ವಿಐಎಸ್‌ಎಲ್ ಎರಡು ಕಾರ್ಖಾನೆಗಳನ್ನು ನಂಬಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಎಂಪಿಎಂ ಕಾರ್ಖಾನೆ ಸ್ಥಗಿತಗೊಂಡು ಸುಮಾರು 10 ವರ್ಷಗಳು ಕಳೆಯುತ್ತಿವೆ. ಕ್ಷೇತ್ರದಲ್ಲಿ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಾಗಿದೆ. ಈ ಹಿನ್ನಲೆಯಲ್ಲಿ ಕಾರ್ಖಾನೆ ಪುನರ್ ಆರಂಭಿಸುವ ಮೂಲಕ ಉದ್ಯೋಗ ಕಲ್ಪಿಸಿಕೊಡುವಂತೆ ಕೋರಿದ್ದಾರೆ.
ಉಳಿದಂತೆ ಕ್ಷೇತ್ರದಲ್ಲಿನ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಶಾಸಕರು ಮನವಿ ಸಲ್ಲಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯರವರು ಬಹುತೇಕ ಬೇಡಿಕೆಗಳಿಗೆ ಪೂರಕವಾಗಿ ಸ್ಪಂದಿಸಿದ್ದಾರೆಂದು ತಿಳಿದು ಬಂದಿದೆ. ಸಿದ್ದರಾಮಯ್ಯರವರನ್ನು ಶಾಸಕರು ಸನ್ಮಾನಿಸಿ ಗೌರವಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಗೋಪಾಲಕೃಷ್ಣ ಬೇಳೂರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post