ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನಗರದ ವಿಐಎಸ್‌ಎಲ್, ಎಂಪಿಎಂ ನೌಕರರ ವಸತಿ ಗೃಹಗಳು, ಸುರಗಿ ತೋಪು ಸೇರಿದಂತೆ ವಿವಿಧ ಜನವಸತಿ ಪ್ರದೇಶದಲ್ಲಿ ರಾತ್ರಿ ವೇಳೆ ಚಿರತೆಯೊಂದು ಸಂಚರಿಸುತ್ತಿದೆ ಎಂಬ ವದಂತಿಗಳು ಹಬ್ಬಿತು. ಇದು ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಎಂಪಿಎಂ ಕ್ವಾಟ್ರಸ್, ಸುರಗಿ ತೋಪು, ಆಕಾಶವಾಣಿ, ಎಂಪಿಎಂ ಕಾರ್ಖಾನೆ ಪ್ರದೇಶಗಳು ಸೇರಿದಂತೆ ಈ ಸುತ್ತಮುತ್ತಲೂ ಜನವಸತಿ ಪ್ರದೇಶದಲ್ಲಿ ರಾತ್ರಿ ವೇಳೆ ಚಿರತೆಯೊಂದು ಸಂಚಾರ ಮಾಡುತ್ತಿದೆ ಎಂದು ಹೇಳಲಾಗಿದೆ. ಸ್ಥಳೀಯ ಹಲವು ಮಂದಿ ತಾವು ಚಿರತೆ ನೋಡಿರುವುದಾಗಿ ಹೇಳಿಕೊಂಡಿದ್ದಾರೆ. ಅಲ್ಲದೇ ಬಾಲಕಿಯೊಬ್ಬಳು ರಾತ್ರಿ ವೇಳೆ ಚಿರತೆ ಮರದಿಂದ ಹಾರುತ್ತಿರುವುದನ್ನು ಕಂಡಿರುವುದಾಗಿ ಹೇಳಿರುವ ವಿಚಾರ ಈ ಭಾಗದಲ್ಲಿ ಸುದ್ದಿಯಾಗಿದೆ.
ಇದೇರೀತಿ ಒಬ್ಬರಿಂದ ಒಬ್ಬರಿಗೆ ಬಾಯಿ ಮಾತಿನಿಂದ ಚಿರತೆ ಕಾಣಿಸಿಕೊಂಡಿರುವ ವದಂತಿ ಹಬ್ಬಿದ್ದು, ಇದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಅಲ್ಲದೆ ರಾತ್ರಿ ವೇಳೆ ಜನರು ಹೊರಬರಲು ಹೆದರುತ್ತಿದ್ದಾರೆ.
Also read: ಉದ್ಯಾನ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ: ತಪ್ಪಿದ ಭಾರೀ ಅನಾಹುತ
ಅಧಿಕಾರಿಗಳು ಸ್ಪಷ್ಟನೆ ನೀಡುವರೆ?
ಚಿರತೆ ಕಾಣಿಸಿಕೊಂಡಿರುವ ವದಂತಿ ಹಿನ್ನೆಲೆಯಲ್ಲಿ ತಾಲೂಕು ಆಡಳಿತ, ಪೊಲೀಸ್ ಇಲಾಖೆ ಅಥವಾ ಅರಣ್ಯ ಇಲಾಖೆ ಅಧಿಕಾರಿಗಳು ಸ್ಪಷ್ಟನೆ ನೀಡಬೇಕಿದೆ. ಸ್ಥಳೀಯರನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಂಡು ಈ ಬಡಾವಣೆಗಳಲ್ಲಿ ಪರಿಶೀಲನೆ ನಡೆಸಬೇಕಿದೆ. ಒಂದು ವೇಳೆ ಚಿರತೆ ಇದ್ದುದೇ ಆದರೆ ಅದನ್ನು ಸೆರೆ ಹಿಡಿಯಲು ಸೂಕ್ತ ಕ್ರಮ ಕೈಗೊಳ್ಳಬೇಕಿದೆ.
ಚಿರತೆ ಕಂಡುಬರದೇ ಹೋದರೂ ಸಾರ್ವಜನಿಕ ಪ್ರಕಟಣೆಯ ಮೂಲಕ ಸಂಬಂಧಿಸಿದ ಅಧಿಕಾರಿಗಳು ಸ್ಪಷ್ಟನೆ ನೀಡುವ ಮೂಲಕ ಸ್ಥಳೀಯರಲ್ಲಿನ ಆರಂಕ ನಿವಾರಿಸಬೇಕಿದೆ. ಕೆಲವು ವಾರಗಳ ಹಿಂದೆ ವಿಐಎಸ್‌ಎಲ್ ಕಾರ್ಖಾನೆ ಒಳಗೆ ಚಿರತೆ ಕಾಣಿಸಿಕೊಂಡಿತ್ತು ಎಂಬ ಸಿಬ್ಬಂದಿಗಳ ಮಾಹಿತಿ ಹಿನ್ನೆಲೆಯಲ್ಲಿ ಅದರ ಸೆರೆಗೆ ಅರಣ್ಯ ಇಲಾಖೆ ಬೋನ್ ಇರಿಸಿತ್ತು. ಅಲ್ಲದೆ ಕೆಲವು ತಿಂಗಳ ಹಿಂದೆ ಕಾರ್ಖಾನೆಯ ವಸತಿ ಗೃಹ ಪ್ರದೇಶದಲ್ಲಿ ಕಾಣಿಸಿಕೊಂಡಿದ್ದ ಚಿರತೆಯನ್ನು ಸೆರೆ ಹಿಡಿದಿದ್ದನ್ನು ಇಲ್ಲಿ ಉಲ್ಲೇಖಿಸಬಹುದು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post