ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನಗರಸಭೆ ಉಪಾಧ್ಯಕ್ಷರಾಗಿ ವಾರ್ಡ್ ನಂ. 26 ಕಾಂಗ್ರೆಸ್ ಪಕ್ಷದ ನಗರಸಭಾ ಸದಸ್ಯೆ ಸರ್ವಮಂಗಳ ಭೈರಪ್ಪ ಶುಕ್ರವಾರ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ.
ಸರ್ವಮಂಗಳರವರು 18 ಹಾಗು ಇವರ ಪ್ರತಿಸ್ಪರ್ಧಿ ವಾರ್ಡ್ ನಂ.25ರ ಜೆಡಿಎಸ್ ಪಕ್ಷದ ನಗರಸಭಾ ಸದಸ್ಯ ಉದಯಕುಮಾರ್ 11 ಮತಗಳನ್ನು ಪಡೆದುಕೊಂಡರು. ಒಟ್ಟು 35 ಸದಸ್ಯ ಬಲ ಹೊಂದಿರುವ ನಗರಸಭೆಯಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದಿದೆ.
ಪರಿಶಿಷ್ಟ ಜಾತಿಗೆ ಮೀಸಲಾದ ಉಪಾಧ್ಯಕ್ಷ ಸ್ಥಾನದ ಅಧಿಕಾರ ಒಪ್ಪಂದದಂತೆ ಹಂಚಿಕೆ ಮಾಡಿಕೊಂಡಿದ್ದು, ಮೊದಲ ಒಪ್ಪಂದ ಅವಧಿಗೆ ಚನ್ನಪ್ಪ ಅಧಿಕಾರ ಪೂರೈಸಿದ್ದಾರೆ. ಇದೀಗ ೨ನೇ ಒಪ್ಪಂದದ ಅವಧಿಗೆ ಸರ್ವಮಂಗಳ ಆಯ್ಕೆಯಾಗಿದ್ದಾರೆ.
Also read: ರಿಸರ್ಚ್ ಡಾಟ್ ಕಾಂ ವಿಶ್ವವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿವಿ ಪ್ರಾಧ್ಯಾಪಕ ಗಿರೀಶ್
ಚುನಾವಣೆಯಲ್ಲಿ ಬಿಜೆಪಿ ಪಕ್ಷದ 3 ಸದಸ್ಯರು ಹಾಗು ಓರ್ವ ಪಕ್ಷೇತರ ಸದಸ್ಯ ತಟಸ್ಥರಾಗಿ ಉಳಿದುಕೊಂಡಿದ್ದು, ಓರ್ವ ಜೆಡಿಎಸ್ ಸದಸ್ಯ ಚುನಾವಣೆಯಲ್ಲಿ ಪಾಲ್ಗೊಂಡಿಲ್ಲ. ಉಪವಿಭಾಗಾಧಿಕಾರಿ ರವಿಚಂದ್ರನಾಯಕ್ ಚುನಾವಣಾಧಿಕಾರಿ ಕರ್ತವ್ಯ ನಿರ್ವಹಿಸಿದರು. ಪೌರಾಯುಕ್ತ ಮನುಕುಮಾರ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post