ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ #VISL ಯಾವುದೇ ಕಾರಣಕ್ಕೂ ಮುಚ್ಚದೇ, ಉಳಿಸಿಕೊಳ್ಳಬೇಕು ಎಂದು ತಾಲೂಕು ಖಾಸಗಿ ಅನುದಾನರಹಿತ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟ ಆಗ್ರಹಿಸಿದೆ.
ವಿಐಎಸ್’ಎಲ್ ಕಾರ್ಖಾನೆಯನ್ನು ಉಳಿಸುವಂತೆ ಒತ್ತಾಯಿಸಿ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ತಹಶೀಲ್ದಾರ್ ಮೂಲಕ ಪ್ರಧಾನಿಯವರಿಗೆ ಮನವಿ ಸಲ್ಲಿಸಲಾಯಿತು.

ಲಕ್ಷಾಂತರ ಕಾರ್ಮಿಕರ ಕುಟುಂಬಗಳ ಜೀವನ ನಿರ್ವಹಣೆಗೆ ಕಾರಣವಾಗಿದ್ದ ಈ ಕಾರ್ಖಾನೆ ದೇಶದ ಪ್ರಗತಿಗೆ ತನ್ನ ಕೊಡುಗೆಯನ್ನು ನೀಡಿದೆ. ನೂರು ವರ್ಷಗಳ ಇತಿಹಾಸವನ್ನು ಹೊಂದಿರುವ ಕರ್ನಾಟಕದ ಹೆಮ್ಮೆಯ ಆಸ್ತಿಯನ್ನು ತನ್ನ ನೀತಿಯ ಹೊರತಾಗಿಯು ಈಗಿನ ತಂತ್ರಜ್ಞಾನ ಬಳಸಿ, ಆಧುನೀಕರಣಗೊಳಿಸಿ ಮುಂದಿನ ಪೀಳಿಗೆಗೆ ಉಳಿಸಿಕೊಳ್ಳುವುದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿರುತ್ತದೆ. ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿಯವರು ದೇಶದ ಪ್ರತಿಷ್ಠಿತ ಸರ್ಕಾರಿ ಕ್ಷೇತ್ರದ ಹಿರಿಯದಾದ ಈ ಕಾರ್ಖಾನೆಯನ್ನು ಸ್ಥಗಿತಗೊಳಿಸುವ ನಿರ್ಧಾರವನ್ನು ತಕ್ಷಣವೇ ಕೈಬಿಟ್ಟು, ಆಧುನಿಕ ತಂತ್ರಜ್ಞಾನ ಬಳಸಿ ಆಧುನೀಕರಣಗೊಳಿಸಲು ಬೇಕಾಗುವ ಬಂಡವಾಳ ತೊಡಗಿಸಿ ಅಭಿವೃದ್ಧಿಪಡಿಸಬೇಕಾಗಿ ಮನವಿಯಲ್ಲಿ ಕೋರಲಾಗಿದೆ.

ಒಕ್ಕೂಟದ ಮಹಾ ಪೋಷಕರು, ಶ್ರೀ ಕ್ಷೇತ್ರ ಆದಿಚುಂಚನಗಿರಿ ಕ್ಷೇತ್ರದ ಕಾರ್ಯದರ್ಶಿ ಶ್ರೀ ಪ್ರಸನ್ನನಾಥಸ್ವಾಮೀಜಿ, ಉಪಾಧ್ಯಕ್ಷರಾದ ಡಾ. ವಿನೀತ್ ಆನಂದ್, ಲತಾ ರಾಬರ್ಟ್, ಕಾರ್ಯದರ್ಶಿ ಶಿವಲಿಂಗೇಗೌಡ, ಸಹಕಾರ್ಯದರ್ಶಿಗಳಾದ ಬಿ.ಎಂ, ಸಂತೋಷ್, ಬಿ. ದೇವರಾಜ, ಖಜಾಂಚಿ ರೆವರೆಂಡ್ ಫಾಸ್ಟರ್ ಹೇನ್ಸ್ ಜಾನ್, ನಿರ್ದೇಶಕರಾದ ಬಿ. ಜಗದೀಶ್, ಜಿ.ಎಸ್. ಮಹೇಶ್ವರಪ್ಪ, ಕೆ. ನಾಗರಾಜ್, ಸಿಸ್ಟರ್ ರೀತಾ, ಜರೇನಾ ಬೇಗಂ, ಆರ್. ಸುರೇಶ್ ಬಾಬು, ಪ್ರಭಾಕರ್, ಬಿ.ಸಿ. ಪ್ರಸಾದ್, ಸಲಹೆಗಾರರಾದ ಬಿ.ಎಲ್. ರಂಗಸ್ವಾಮಿ, ಡಾ. ಮಹಾಬಲೇಶ್ವರ ಮತ್ತು ಕಾಳೇಗೌಡ, ಗುತ್ತಿಗೆ ಕಾರ್ಮಿಕರ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಸೇರಿದಂತೆ ತಾಲೂಕಿನ ಎಲ್ಲಾ ಅನುದಾನರಹಿತ ಶಾಲೆಗಳ ಸುಮಾರು 5 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು, ಸಿಬ್ಬಂದಿ ವರ್ಗದವರು ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post