No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
  • Advertise With Us
  • Grievances
  • About Us
  • Contact Us
Saturday, August 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ವಿಐಎಸ್’ಎಲ್ ಉಳಿಸಿ: ತಾಲೂಕು ಖಾಸಗಿ ಅನುದಾನರಹಿತ ಶಾಲಾ ಒಕ್ಕೂಟದಿಂದ ಬೃಹತ್ ಪ್ರತಿಭಟನೆ

ಬೃಹತ್ ಪ್ರತಿಭಟನೆಯಲ್ಲಿ 5 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಭಾಗಿ

kalpa News by kalpa News
February 22, 2023
in ಭದ್ರಾವತಿ
0
ವಿಐಎಸ್’ಎಲ್ ಉಳಿಸಿ: ತಾಲೂಕು ಖಾಸಗಿ ಅನುದಾನರಹಿತ ಶಾಲಾ ಒಕ್ಕೂಟದಿಂದ ಬೃಹತ್ ಪ್ರತಿಭಟನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  |

ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ #VISL ಯಾವುದೇ ಕಾರಣಕ್ಕೂ ಮುಚ್ಚದೇ, ಉಳಿಸಿಕೊಳ್ಳಬೇಕು ಎಂದು ತಾಲೂಕು ಖಾಸಗಿ ಅನುದಾನರಹಿತ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟ ಆಗ್ರಹಿಸಿದೆ.

ವಿಐಎಸ್’ಎಲ್ ಕಾರ್ಖಾನೆಯನ್ನು ಉಳಿಸುವಂತೆ ಒತ್ತಾಯಿಸಿ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ತಹಶೀಲ್ದಾರ್ ಮೂಲಕ ಪ್ರಧಾನಿಯವರಿಗೆ ಮನವಿ ಸಲ್ಲಿಸಲಾಯಿತು.
ಭಾರತರತ್ನ ಸರ್.ಎಂ. ವಿಶ್ವೇಶ್ವರಯ್ಯ ಅವರ ದೂರ ದೃಷ್ಟಿಯ ಕಾರಣದಿಂದ ಅಂದಿನ ಮೈಸೂರು #Mysore ಮಹಾರಾಜರಾಗಿದ್ದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಂದ ನಿರ್ಮಾಣಗೊಂಡು ಮೈಸೂರು ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಎನ್ನುವ ಹೆಸರಿನಿಂದ ಕರೆಯಲ್ಪಡುತ್ತಿದ್ದ ಈ ಕಾರ್ಖಾನೆ 1923ರಲ್ಲಿ ಉತ್ಪಾದನೆ ಪ್ರಾರಂಭಿಸಿತು. ಭಾರತದ ಸ್ವಾತಂತ್ರ ಪೂರ್ವದಲ್ಲಿ ಪ್ರಾರಂಭಗೊAಡ ಸರ್ಕಾರದ ಮಾಲಿಕತ್ವದ ಮೊದಲ ಏಕೈಕ ಕಾರ್ಖಾನೆ ಇದಾಗಿದ್ದು, ನಂತರ ವಿಶ್ವೇಶ್ವರಾಯ ಐರನ್ ಅಂಡ್ ಸ್ಟೀಲ್ ಕಂಪೆನಿ, ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಎಂಬ ಬದಲಾದ ಹೆಸರಿನಿಂದ ವಿಶೇಷ ಉಕ್ಕು ಉತ್ಪಾದನೆಗೆ ದೇಶ ವಿದೇಶಗಳಲ್ಲಿ ಹೆಸರು ಮಾಡಿ ಪ್ರಸ್ತುತ ಭಾರತ ಸರ್ಕಾರದ ನೀತಿಯಿಂದಾಗಿ ಮುಚ್ಚಲ್ಪಡುವ ಹಂತಕ್ಕೆ ಬಂದು ನಿಂತಿರುವುದು ವಿಷಾದನೀಯ ಬೆಳವಣಿಗೆಯಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಲಕ್ಷಾಂತರ ಕಾರ್ಮಿಕರ ಕುಟುಂಬಗಳ ಜೀವನ ನಿರ್ವಹಣೆಗೆ ಕಾರಣವಾಗಿದ್ದ ಈ ಕಾರ್ಖಾನೆ ದೇಶದ ಪ್ರಗತಿಗೆ ತನ್ನ ಕೊಡುಗೆಯನ್ನು ನೀಡಿದೆ. ನೂರು ವರ್ಷಗಳ ಇತಿಹಾಸವನ್ನು ಹೊಂದಿರುವ ಕರ್ನಾಟಕದ ಹೆಮ್ಮೆಯ ಆಸ್ತಿಯನ್ನು ತನ್ನ ನೀತಿಯ ಹೊರತಾಗಿಯು ಈಗಿನ ತಂತ್ರಜ್ಞಾನ ಬಳಸಿ, ಆಧುನೀಕರಣಗೊಳಿಸಿ ಮುಂದಿನ ಪೀಳಿಗೆಗೆ ಉಳಿಸಿಕೊಳ್ಳುವುದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿರುತ್ತದೆ. ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿಯವರು ದೇಶದ ಪ್ರತಿಷ್ಠಿತ ಸರ್ಕಾರಿ ಕ್ಷೇತ್ರದ ಹಿರಿಯದಾದ ಈ ಕಾರ್ಖಾನೆಯನ್ನು ಸ್ಥಗಿತಗೊಳಿಸುವ ನಿರ್ಧಾರವನ್ನು ತಕ್ಷಣವೇ ಕೈಬಿಟ್ಟು, ಆಧುನಿಕ ತಂತ್ರಜ್ಞಾನ ಬಳಸಿ ಆಧುನೀಕರಣಗೊಳಿಸಲು ಬೇಕಾಗುವ ಬಂಡವಾಳ ತೊಡಗಿಸಿ ಅಭಿವೃದ್ಧಿಪಡಿಸಬೇಕಾಗಿ ಮನವಿಯಲ್ಲಿ ಕೋರಲಾಗಿದೆ.
ವಿಐಎಸ್’ಎಲ್ ಕಾರ್ಖಾನೆ ಮುಂಭಾಗದಿಂದ ಆರಂಭಗೊಂಡ ಮೆರವಣಿಗೆ ಡಬ್ಬಲ್ ರಸ್ತೆ ಮೂಲಕ ಅಂಬೇಡ್ಕರ್ ವೃತ್ತ, ಹಾಲಪ್ಪ ವೃತ್ತ, ಮಾಧವಚಾರ್ ವೃತ್ತ ಮತ್ತು ರಂಗಪ್ಪ ವೃತ್ತ ಮೂಲಕ ತಾಲೂಕು ಕಚೇರಿ ತಲುಪಿತು.

ಒಕ್ಕೂಟದ ಮಹಾ ಪೋಷಕರು, ಶ್ರೀ ಕ್ಷೇತ್ರ ಆದಿಚುಂಚನಗಿರಿ ಕ್ಷೇತ್ರದ ಕಾರ್ಯದರ್ಶಿ ಶ್ರೀ ಪ್ರಸನ್ನನಾಥಸ್ವಾಮೀಜಿ, ಉಪಾಧ್ಯಕ್ಷರಾದ ಡಾ. ವಿನೀತ್ ಆನಂದ್, ಲತಾ ರಾಬರ್ಟ್, ಕಾರ್ಯದರ್ಶಿ ಶಿವಲಿಂಗೇಗೌಡ, ಸಹಕಾರ್ಯದರ್ಶಿಗಳಾದ ಬಿ.ಎಂ, ಸಂತೋಷ್, ಬಿ. ದೇವರಾಜ, ಖಜಾಂಚಿ ರೆವರೆಂಡ್ ಫಾಸ್ಟರ್ ಹೇನ್ಸ್ ಜಾನ್, ನಿರ್ದೇಶಕರಾದ ಬಿ. ಜಗದೀಶ್, ಜಿ.ಎಸ್. ಮಹೇಶ್ವರಪ್ಪ, ಕೆ. ನಾಗರಾಜ್, ಸಿಸ್ಟರ್ ರೀತಾ, ಜರೇನಾ ಬೇಗಂ, ಆರ್. ಸುರೇಶ್ ಬಾಬು, ಪ್ರಭಾಕರ್, ಬಿ.ಸಿ. ಪ್ರಸಾದ್, ಸಲಹೆಗಾರರಾದ ಬಿ.ಎಲ್. ರಂಗಸ್ವಾಮಿ, ಡಾ. ಮಹಾಬಲೇಶ್ವರ ಮತ್ತು ಕಾಳೇಗೌಡ, ಗುತ್ತಿಗೆ ಕಾರ್ಮಿಕರ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಸೇರಿದಂತೆ ತಾಲೂಕಿನ ಎಲ್ಲಾ ಅನುದಾನರಹಿತ ಶಾಲೆಗಳ ಸುಮಾರು 5 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು, ಸಿಬ್ಬಂದಿ ವರ್ಗದವರು ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiKannada News WebsiteLatest News KannadaNalvadi Krishnaraja WodeyarSAILShimogaShivamoggaShivamogga NewsSir M VishweshwaraiahVISLನಾಲ್ವಡಿ ಕೃಷ್ಣರಾಜ ಒಡೆಯರ್ಭದ್ರಾವತಿವಿಐಎಸ್'ಎಲ್ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಸರ್.ಎಂ. ವಿಶ್ವೇಶ್ವರಯ್ಯ
Share217Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗದ ಇಂದಿನ ಸುದ್ಧಿಗಳು ಇಲ್ಲಿದೆ ನೋಡಿ

Next Post

ಶಿವಮೊಗ್ಗ: ವೇ ಬ್ರಂ ವಿದ್ವಾನ್ ಅ.ಪ. ರಾಮಭಟ್ಟರು ವಿಧಿವಶ

kalpa News

kalpa News

Next Post
ಶಿವಮೊಗ್ಗ: ವೇ ಬ್ರಂ ವಿದ್ವಾನ್ ಅ.ಪ. ರಾಮಭಟ್ಟರು ವಿಧಿವಶ

ಶಿವಮೊಗ್ಗ: ವೇ ಬ್ರಂ ವಿದ್ವಾನ್ ಅ.ಪ. ರಾಮಭಟ್ಟರು ವಿಧಿವಶ

Leave a Reply Cancel reply

Your email address will not be published. Required fields are marked *

No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL