ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಮೂರು ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ತವೆಸಗಿದ್ದ ಆರೋಪಿಗೆ ಶಿವಮೊಗ್ಗ ಜಿಲ್ಲಾ ನ್ಯಾಯಾಲಯ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ 1ಲಕ್ಷ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.
ರಾಘವೇಂದ್ರ (27) 3 ವರ್ಷ 4 ತಿಂಗಳ ಹೆಣ್ಣು ಮಗುವಿನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆಂದು ಸಂತ್ರಸ್ತ ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಪೋಕ್ಸೋ ಕಾಯ್ದೆಯಡಿಯಲ್ಲಿ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.
ತನಿಖಾಧಿಕಾರಿ ಮಂಜುನಾಥ್ ನೇತೃತ್ವದಲ್ಲಿ ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು. ಆರೋಪ ಸಾಬೀತಾದ ಹಿನ್ನೆಲೆ ನ್ಯಾಯಾಲಯವು ಆರೋಪಿ ರಾಘವೇಂದ್ರನಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಒಂದು ಲಕ್ಷ ರೂ. ದಂಡ ವಿಧಿಸಿದ್ದು, ತಪ್ಪಿದಲ್ಲಿ ಹೆಚ್ಚುವರಿ 6 ತಿಂಗಳ ಸಜಾ ವಿಧಿಸಿ ಆದೇಶಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post