ಕಲ್ಪ ಮೀಡಿಯಾ ಹೌಸ್ | ಭದ್ರಾವತಿ/ಶಿಕಾರಿಪುರ |
ನಗರದ ಮಿಲ್ಟ್ರಿಕ್ಯಾಂಪ್‌ನಲ್ಲಿ ನೂತನ ಪೊಲೀಸ್ ವಸತಿ ಗೃಹ ಸಮುಚ್ಛಯ ಹಾಗು ಹೊಸಮನೆ ಶಿವಾಜಿ ವೃತ್ತ ಪೊಲೀಸ್ ಠಾಣೆ ನಿರ್ಮಾಣಕ್ಕೆ ಭೂಮಿ ಪೂಜೆ ಮತ್ತು ನೂತನವಾಗಿ ನಿರ್ಮಾಣಗೊಂಡಿರುವ ಗ್ರಾಮಾಂತರ ಪೊಲೀಸ್ ಠಾಣೆ ಕಟ್ಟಡವನ್ನು ಗೃಹ ಸಚಿವ ಆರಗ ಜ್ಞಾನೇಂದ್ರ Home Minister Araga Gnanendra ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶಾಸಕ ಬಿ.ಕೆ. ಸಂಗಮೇಶ್ವರ, MLA Sangameshwar ನೂತನ ಜಿಲ್ಲಾ ಪೊಲೀಸ್ ರಕ್ಷಣಾಧಿಕಾರಿ ಜಿ.ಕೆ. ಮಿಥುನ್‌ಕುಮಾರ್, SP Mithun Kumar ಪೊಲೀಸ್ ವಿಭಾಗ ವ್ಯಾಪ್ತಿಯ ಸಹಾಯಕ ಪೊಲೀಸ್ ಅಧೀಕ್ಷಕರು, ವೃತ್ತ ನಿರೀಕ್ಷಕರು, ವಿವಿಧ ಠಾಣೆಗಳ ಠಾಣಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಶಿರಾಳಕೊಪ್ಪದಲ್ಲಿ ವಸತಿ ಗೃಹ ಶಂಕುಸ್ಥಾಪನೆ:
ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಸುಮಾರು 20 ಕೋಟಿ ವೆಚ್ಚದಲ್ಲಿ ಶಿಕಾರಿಪುರದಲ್ಲಿ 60 ಮತ್ತು ಶಿರಾಳಕೊಪ್ಪ ಪಟ್ಟಣದಲ್ಲಿ 12 ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ವಸತಿ ಗೃಹದ ಶಂಕುಸ್ಥಾಪನೆಯನ್ನು ಗೃಹ ಸಚಿವ ಆರಗ ಜಾನೇಂದ್ರ ಅವರೊಂದಿಗೆ ಸಂಸದ ಬಿ. ವೈ ರಾಘವೇಂದ್ರ MP Raghavendra ಅವರು ನೆರವೇರಿಸಿದರು.
Also read: ಸ್ಫರ್ಧಾತ್ಮಕ ಶಿಕ್ಷಣಕ್ಕಿಂತ ಶ್ರದ್ಧೆಯ ಶಿಕ್ಷಣ ಅತಿಮುಖ್ಯವಾಗಿದೆ: ಜಿ.ಎಸ್. ನಾರಾಯಣರಾವ್
ಈ ಸಂದರ್ಭದಲ್ಲಿ ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ. ಎಸ್. ಗುರುಮೂರ್ತಿ, ಪೊಲೀಸ್ ವರಿಷ್ಠಾಧಿಕಾರಿ ಜಿ. ಕೆ. ಮಿಥುನ್ ಕುಮಾರ್, ಅರಣ್ಯ ನಿಗಮ ಉಪಾಧ್ಯಕ್ಷ ರೇವಣಪ್ಪ, ಪುರಸಭೆ ಅಧ್ಯಕ್ಷ ರೇಖಾ ಭಾಯಿ, ಸಿಪಿಐ ಲಕ್ಷ್ಮಣ್, ಎಸ್.ಐ. ಪ್ರಶಾಂತ್, ರವಿಕುಮಾರ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post