ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಮಾ.26ರಂದು ಭದ್ರಾವತಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಚುನಾಯಿತ ಪ್ರತಿನಿಧಿಗಳು, ಪಕ್ಷದ ಪದಾಧಿಕಾರಿಗಳು, ಮುಖಂಡರುಗಳ ಹಾಗೂ ಕಾರ್ಯಕರ್ತರುಗಳ ಸಭೆಯನ್ನು ಏರ್ಪಡಿಸಲಾಗಿದೆ.
ಈ ಸಭೆಗೆ ತಾಲ್ಲೂಕಿನ ಕಾರ್ಯಕರ್ತರುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವಕ್ತಾರ ಹಾಗೂ ಭದ್ರಾವತಿ ತಾಲ್ಲೂಕು ಹಿಂದುಳಿದ ವರ್ಗಗಳ ಅಧ್ಯಕ್ಷ ರಮೇಶ್ ಶೆಟ್ಟಿ ಶಂಕರಘಟ್ಟ ಮನವಿ ಮಾಡಿದ್ದಾರೆ.
ಭದ್ರಾವತಿಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ಗ್ರಾಮೀಣ ಮೂಲಸೌಕರ್ಯ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಬಿ.ಕೆ.ಸಂಗಮೇಶ್ವರ್ ಇವರ ಅಧ್ಯಕ್ಷತೆಯಲ್ಲಿ ಶಾಸಕರ ಸಹೋದರ ಬಿ.ಕೆ.ಶಿವಕುಮಾರ್ ಇವರ ನಿವಾಸದ ಆವರಣದಲ್ಲಿರುವ ಸಭಾಂಗಣದಲ್ಲಿ ಸಭೆಯನ್ನು ಬೆಳಿಗ್ಗೆ 10.30 ಘಂಟೆಗೆ ಆಯೋಜಿಸಿಗಿದೆ.
Also read: ಎಸ್’ಎಸ್’ಎಲ್’ಸಿ ಪರೀಕ್ಷೆ | ಸಾಗರದಲ್ಲಿ ವಿದ್ಯಾರ್ಥಿ ಆತ್ಮಹತ್ಯೆ
ಈ ಸಭೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಗೀತಾ ಶಿವರಾಜ್ ಕುಮಾರ್, Geetha Shivarajkumar ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧುಬಂಗಾರಪ್ಪ, ಶಾಸಕ ಬೇಳೂರು ಗೋಪಾಲಕೃಷ್ಣ, ಎಂ.ಎ.ಡಿ.ಬಿ. ಅಧ್ಯಕ್ಷ ಡಾ.ಆರ್.ಎಂ.ಮಂಜುನಾಥಗೌಡ, ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ ಆಗಮಿಸಲಿದ್ದಾರೆ.
ಹಾಗೂ ವಿವಿಧ ನಿಗಮಗಳ ಅಧ್ಯಕ್ಷರು, ಚಲನಚಿತ್ರ ನಟರಾದ ಡಾ.ಶಿವರಾಜ್ ಕುಮಾರ್, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹೆಚ್.ಎಸ್.ಸುಂದರೇಶ್, ಜಿಲ್ಲಾ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ರಮೇಶ್ ಇಕ್ಕೇರಿ, ಕಾಂಗ್ರೆಸ್ ಮುಖಂಡರುಗಳಾದ ಆರ್.ಪ್ರಸನ್ನಕುಮಾರ್, ಎಂ.ಶ್ರೀಕಾಂತ್, ಜಿಲ್ಲೆಯ ಮುಖಂಡರುಗಳು, ಕೆಪಿಸಿಸಿ ಸದಸ್ಯರು, ಭದ್ರಾವತಿ ನಗರ ಹಾಗೂ ಗ್ರಾಮಾಂತರ ಕಾಂಗ್ರೆಸ್ ಘಟಕದ ಅಧ್ಯಕ್ಷರಗಳು, ಮುಂಚೂಣಿ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಹಿಂದುಳಿದ ವರ್ಗಗಳ ನಗರ ಹಾಗೂ ಗ್ರಾಮಾಂತರ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿರುತ್ತಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post