ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ಜನ ಸಂಘದ ಸಂಸ್ಥಾಪಕರು, ಭಾರತ ದೇಶದ ಅವಿಭಾಜ್ಯ ಅಂಗವಾದ ಕಾಶ್ಮೀರಕ್ಕೆ ಪ್ರತ್ಯೇಕ ಸ್ಥಾನಮಾನ ನೀಡಲು ಮುಂದಾಗುವ ಮೂಲಕ ಅಖಂಡ ಭಾರತದ ಸಾರ್ವಭೌಮತ್ವಕ್ಕೆ ಧಕ್ಕೆ ತರುವ ಕೆಲಸ ಮಾಡಿದ ಆಗಿನ ಕೇಂದ್ರ ಸರ್ಕಾರದ ನಡೆಯನ್ನು ವಿರೋಧಿಸಿ ಉಗ್ರ ಹೋರಾಟದ ಮೂಲಕ ನ್ಯಾಯವನ್ನು ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡುವ ಸಮಯದಲ್ಲಿ ದೇಶಕ್ಕಾಗಿ ತಮ್ಮ ಪ್ರಾಣವನ್ನು ಅರ್ಪಿಸಿದ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಬಲಿದಾನ ದಿವಸದಂದು ತಾಲ್ಲೂಕು ಬಿಜೆಪಿ ರೈತ ಮೋರ್ಚಾ ವತಿಯಿಂದ ಬಿಳಿಕಿ ಮಠದಲ್ಲಿ ಸಸಿ ನೆಡುವ ಮೂಲಕ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರಮುಖರು ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಜೀವನ ದರ್ಶನದ ಪರಿಚಯ ಜೊತೆಗೆ ದೇಶಕ್ಕಾಗಿ ಅಖಂಡತೆಗಾಗಿ ಮಾಡಿದ ಅವಿರತ ಶ್ರಮದ ಕುರಿತು ಸವಿಸ್ತಾರವಾಗಿ ಪ್ರಸ್ತಾಪಿಸಿದರು, ಮುಂದಿನ ಪೀಳಿಗೆ ಇವರ ಮಾದರಿ ಜೀವನ ಅಳವಡಿಸಿಕೊಳ್ಳುವಂತೆ ಕರೆ ಕೊಡಲಾಯಿತು.
ಈ ಕಾರ್ಯಕ್ರಮದಲ್ಲಿ ಬಿಳಕಿ ಮಠದ ಶ್ರೀಗಳಾದ ರಾಚೋಟೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಭದ್ರಾ ಕಾಡಾ ಅಧ್ಯಕ್ಷೆ ಪವಿತ್ರ ರಾಮಯ್ಯ, ಭದ್ರಾವತಿ ಮಂಡಲ ಅಧ್ಯಕ್ಷ ಒ. ಪ್ರಭಾಕರ್, ರೈತ ಮೋರ್ಚಾ ಅಧ್ಯಕ್ಷ ನಾಗರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀನಾಥ್, ಮಂಡಲ ಪ್ರಧಾನ ಕಾರ್ಯದರ್ಶಿ ಚನ್ನೇಶ್, ಹನುಮಂತನಾಯ್ಕ, ಉಪಾಧ್ಯಕ್ಷ ಮಣಿ, ರಾಜ್ಯ ಮಾಧ್ಯಮ ವಿಭಾಗದ ಸದಸ್ಯ ಅವಿನಾಶ್, ಆರ್‌ಎಸ್‌ಎಸ್ ಪ್ರಮುಖ ಅರಳಿಹಳ್ಳಿ ಪ್ರಕಾಶ್, ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಆನಂದ್, ಸಂತೋಷ್ ಇನ್ನಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post