ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಭಾರತ ರತ್ನ ಸರ್.ಎಂ ವಿಶ್ವೇಶ್ವರಾಯ Sir M Vishweshwaraya ಕೇವಲ ಒಂದು ಪ್ರದೇಶಕ್ಕೆ, ಒಂದು ದೇಶಕ್ಕೆ, ರಾಷ್ಟ್ರಕ್ಕೆ ಸೀಮಿತ ಅಲ್ಲ ಇಡೀ ಜನ ಸಮುದಾಯಕ್ಕೆ ಸೇರಿದ ಮಹಾನ್ ಆದರ್ಶ ವ್ಯಕ್ತಿ ಎಂದು ಪೌರಾಯುಕ್ತ ಮನುಕುಮಾರ್ ಹೇಳಿದರು.
ಅವರು ಬುಧವಾರ ನಗರದ ಜನ್ನಾಪುರ ಕೆರೆ ಸಮೀಪದ ಹೊಸ ಸಿದ್ದಾಪುರ ರಸ್ತೆಯಲ್ಲಿರುವ ನಾಗರಕಟ್ಟೆ ದೇವಸ್ಥಾನದಲ್ಲಿ ಕರ್ನಾಟಕ ಸ್ಟೇಟ್ ಕನ್ಸ್ಟ್ರಕ್ಷನ್ ವರ್ಕರ್ಸ್ ಸೆಂಟ್ರಲ್ ಯೂನಿಯನ್ ಹಾಗೂ ಶಿವಮೊಗ್ಗ ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಅಶ್ವತ್ ಕಟ್ಟೆ, ನಾಗರಕಟ್ಟೆ ಸೇವಾ ಸಮಿತಿ ಹಾಗೂ ಸಂಗೊಳ್ಳಿ ರಾಯಣ್ಣ ಯುವ ಪಡೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಸರ್.ಎಂ ವಿಶ್ವೇಶ್ವರಾಯ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

Also read: ಗುರುದತ್ತ ಬಡವಾಣೆಯಲ್ಲಿ 17ನೆಯ ವರ್ಷದ ಗಣೇಶೋತ್ಸವಕ್ಕೆ ಸಂಭ್ರಮದ ತೆರೆ
ಕಾರ್ಖಾನೆಗಳು ಈ ದೇಶದ ಬೆನ್ನೆಲುಬು ಎಂಬ ಅವರ ನಿಲುವು ಹಾಗೂ ಆ ದಾರಿಯಲ್ಲಿ ಸಾಗಿಬಂದ ಅವರ ಬದುಕು. ಅವರು ತಮ್ಮ ಬದುಕಿನಲ್ಲಿ ಅಳವಡಿಸಿಕೊಂಡಿದ್ದ ಪ್ರಾಮಾಣಿಕತೆ, ಸಮಯ ಪಾಲನೆ, ಶಿಸ್ತು ಬದ್ಧತೆ ಇಂದಿಗೂ ಆದರ್ಶಪ್ರಾಯವಾಗಿದೆ ಎಂದರು.

ಯೂನಿಯನ್ ತಾಲೂಕು ಅಧ್ಯಕ್ಷ ಚಂದ್ರಶೇಖರ್, ಮನೋಹರ್, ಶಿವಣ್ಣ ಗೌಡ, ಅಭಿಲಾಶ್, ನಾಗಭೂಷಣ್, ನಗರಸಭಾ ಸದಸ್ಯರಾದ ರಿಯಾಜ್ ಅಹಮದ್, ಆರ್. ಶ್ರೇಯಸ್(ಚಿಟ್ಟೆ), ನಾಗರಕಟ್ಟೆ ಸೇವಾ ಸಮಿತಿ ಅಧ್ಯಕ್ಷ ಮಂಜುನಾಥ್, ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ತಜ್ಞ ವೈದ್ಯರು ಮತ್ತು ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.











Discussion about this post