ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ಜನತಾ ಕರ್ಫ್ಯೂ ನಿಯಮ ಉಲ್ಲಂಘಿಸಿ ಅನಾವಶ್ಯಕವಾಗಿ ಓಡಾಡುವ ವಾಹನಗಳನ್ನು ಸೀಜ್ ಮಾಡಿ ಎಂದು ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀ ಪ್ರಸಾದ್ ಅವರು ಇಲಾಖೆಗೆ ನಿರ್ದೇಶನ ನೀಡಿದ್ದಾರೆ.
ಜನತಾ ಕರ್ಫ್ಯೂ ಹಿನ್ನೆಲೆಯಲ್ಲಿ ನಗರದಲ್ಲಿ ಸಿಟಿ ರೌಂಡ್ಸ್ ನಡೆಸಿ, ಪರಿಶೀಲನೆ ನಡೆಸಿದ ನಂತರ ಇಲಾಖೆಯ ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಇಲ್ಲ ಸಲ್ಲದ ಕಾರಣಗಳನ್ನು ನೀಡಿ ಸಂಚರಿಸುತ್ತಿರುವವರ ಸಂಖ್ಯೆ ಹೆಚ್ಚಾಗಿದೆ ಎಂದು ಮಾಹಿತಿ ಬಂದಿದೆ. ಪ್ರಮುಖವಾಗಿ ಬ್ಯಾಂಕ್ ವ್ಯವಹಾರ ಎಂದು ಹೇಳಿಕೊಂಡು ಬಹಳಷ್ಟು ಮಂದಿ ತಿರುಗಾಡುತ್ತಿರುವುದು ಗಮನಕ್ಕೆ ಬಂದಿದೆ. ಇಂತಹವರನ್ನು ಅಗತ್ಯ ದಾಖಲೆಗಳೊಂದಿಗೆ ಪರಿಶೀಲನೆ ನಡೆಸಿ. ಸರಿಯಾದ ಕಾರಣ ಹಾಗೂ ದಾಖಲೆ ನೀಡದೇ ಇದ್ದರೆ ಅಂತಹವರ ವಾಹನವನ್ನು ಮುಲಾಜಿಲ್ಲದೇ ಸೀಜ್ ಮಾಡಿ ಎಂದು ಮೌಖಿಕ ನಿರ್ದೇಶನ ನೀಡಿದ್ದಾರೆ.
ಇನ್ನು, ಮುಂಜಾನೆ 6ರಿಂದ 10 ಗಂಟೆಯವರೆಗೂ ಜನತಾ ಕರ್ಫ್ಯೂ ಅವಧಿಯಲ್ಲಿ ಅಗತ್ಯ ವಸ್ತು ಖರೀದಿ ವೇಳೆ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ. ಇದನ್ನು ಉಲ್ಲಂಘಿಸಿ ಹೆಚ್ಚು ಜನ ಗುಂಪುಗೂಡಿದರೆ ಅಂತಹವರ ವಿರುದ್ಧ ಎಫ್’ಐಆರ್ ದಾಖಲಿಸಬೇಕಾಗುತ್ತದೆ ಎಂದವರು ಎಚ್ಚರಿಕೆ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post