ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ಲಾಕ್‌ಡೌನ್ ಹಿನ್ನೆಲೆಯಲ್ಲಿ ಜಿಲ್ಲಾರಕ್ಷಣಾಧಿಕಾರಿ ಬಿ.ಎಮ್. ಲಕ್ಷ್ಮಿ ಪ್ರಸಾದ್ ನಗರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಭದ್ರಾವತಿಗೆ ಅನಿರೀಕ್ಷಿತ ಭೇಟಿ ನೀಡಿದ ಅವರು, ಪ್ರಮುಖ ರಸ್ತೆಗಳಲ್ಲಿ ರೌಂಡ್ಸ್ ನಡೆಸಿದರು. ಡಿವೈಎಸ್‌ಪಿ ಕೃಷ್ಣಮೂರ್ತಿ ಸೇರಿದಂತೆ ಹಿರಿಯ ಅಧಿಕಾರಿಗಳಿಂದ ಭದ್ರತೆ ಕುರಿತಾಗಿ ಮಾಹಿತಿ ಪಡೆದುಕೊಂಡರು.
ಈ ಕುರಿತಂತೆ ಕಲ್ಪ ಮೀಡಿಯಾ ಹೌಸ್ ಜೊತೆಯಲ್ಲಿ ಮಾತನಾಡಿದ ಜಿಲ್ಲಾರಕ್ಷಣಾಧಿಕಾರಿ, ಲಾಕ್‌ಡೌನ್ ಹಿನ್ನೆಲೆಯಲ್ಲಿ ನಗರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದೇವೆ. ಸರ್ಕಾರದ ಮಾರ್ಗಸೂಚಿಯಂತೆ ಬೆಳಿಗ್ಗೆ 10ಗಂಟೆಗೆ ಎಲ್ಲವನ್ನು ಬಂದ್ ಮಾಡಿಸಲಾಗಿದೆ. ಲಾಕ್‌ಡೌನ್ ಕಟ್ಟುನಿಟ್ಟಿನ ಜಾರಿ ಬಗ್ಗೆ ಇಲಾಖೆ ಎಲ್ಲಾ ರೀತಿಯ ಕಠಿಣ ಕ್ರಮ ಕೈಗೊಂಡಿದೆ. ಸೋಂಕು ಹರಡುವುದನ್ನು ತಡೆಗಟ್ಟಲು ಸರ್ಕರದ ಮಾರ್ಗಸೂಚಿಯನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿದ್ದೇವೆ ಎಂದರು.
ಮುಂಜಾನೆ 6ರಿಂದ 10ಗಂಟೆಯ ಅವಧಿಯಲ್ಲಿ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದವರ ವಿರುದ್ಧ ದಂಡ ವಿಧಿಸುವುದು ಸೇರಿದಂತೆ ಕಠಿಣ ಕ್ರಮ ಕೈಗೊಳ್ಳುತ್ತಿದ್ದೇವೆ. ಇಂದೂ ಸಹ ಭದ್ರಾವತಿ ಸೇರಿದಂತೆ ಜಿಲ್ಲೆಯಾದ್ಯಂತ ಬಹಳಷ್ಟು ದಂಡ ವಿಧಿಸಲಾಗಿದೆ. ಕಾನೂನು ಉಲ್ಲಂಘಿಸುವ ಯವುದೇ ಕ್ರಮವನ್ನು ಇಲಾಖೆ ಸಹಿಸುವುದಿಲ್ಲ. ಜನರು ಇದಕ್ಕೆ ಸಹಕರಿಸಬೇಕು. ತಪ್ಪಿದಲ್ಲಿ ಕ್ರಮ ಅನಿವಾರ್ಯ ಎಂದರು.
ಬ್ಯಾಂಕ್ ಕೆಲಸ ಎಂಬ ಹೆಸರಿನಲ್ಲಿ ಜನರು ಅನಾವಶ್ಯಕ ತಿರುಗಾಡುತ್ತಿರುವುದು ಗಮನಕ್ಕೆ ಬಂದಿದೆ. ಯಾರು ನಿಜವಾಗಿಯೂ ಬ್ಯಾಂಕ್ ವ್ಯವಹಾರಕ್ಕೆ ಓಡಾಡುತ್ತಾರೆ ಎಂಬುದನ್ನು ಪರಿಶೀಲಿಸಲು ಸೂಚಿಸಿದ್ದೇವೆ. ಬ್ಯಾಂಕ್ ವ್ಯವಹಾರಕ್ಕೆಂದು ಸುಳ್ಳು ಹೇಳಿ ತಿರುಗಾಡುತ್ತಿರುವುದು ಸಾಭೀತಾದರೆ ವಾಹನ ಸೀಜ್ ಮಾಡುವ ಜೊತೆಯಲ್ಲಿ ಕಾನೂನು ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post