ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಅನಾರೋಗ್ಯಕ್ಕೆ ಒಳಗಾಗಿರುವ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ #H D Kumaraswamy ಅವರು ಶೀಘ್ರ ಗುಣಮುಖರಾಗಲಿ ಎಂದು ವಿಐಎಸ್’ಎಲ್ #VISL ಕಾರ್ಮಿಕರು ಪ್ರಾರ್ಥನೆ , ಪೂಜೆ ಮಾಡಿದ್ದಾರೆ.
ಕಾರ್ಖಾನೆಯ ಪ್ರವೇಶ ದ್ವಾರದಲ್ಲಿರುವ ಗಣಪತಿ ದೇವಾಲಯದಲ್ಲಿ ಕಾರ್ಮಿಕರು ಮತ್ತು ಗುತ್ತಿಗೆ ಕಾರ್ಮಿಕರು ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಹೆಸರಿನಲ್ಲಿ ಪೂಜೆ ಸಲ್ಲಿಸಿದ್ದಾರೆ.
ಸಚಿವರು ಶೀಘ್ರ ಗುಣಮುಖರಾಗಿ, ಅವರಿಗೆ ಆರೋಗ್ಯ, ಭಾಗ್ಯ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.
ನಿನ್ನೆ ಜೆಡಿಎಸ್, ಬಿಜೆಪಿ ಸಮನ್ವಯ ಸಮಿತಿ ಸಭೆ ಬಳಿಕ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಮೂಗಿನಿಂದ ರಕ್ತಸ್ರಾವವಾಗಿತ್ತು. ತತಕ್ಷಣವೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ವಿಶ್ರಾಂತಿ ಪಡೆದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post