ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಶೃಂಗೇರಿ ದಕ್ಷಿಣಾಮ್ನಾಯ ಪೀಠದ ಜಗದ್ಗುರು ಶಂಕರಾಚಾರ್ಯ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳವರು ನ.25ರಂದು ನಗರಕ್ಕೆ ಭೇಟಿ ನೀಡಲಿದ್ದಾರೆ.
ಈ ಕುರಿತಂತೆ ಮಾತನಾಡಿದ ಶ್ರೀಮಠದ ಧರ್ಮಾಧಿಕಾರಿ ಕೆ.ಆರ್. ಸುಬ್ಬರಾವ್, ನ.25ರಂದು ಸಂಜೆ 6 ಗಂಟೆಗೆ ಶ್ರೀಗಳನ್ನು ಕೆಎಸ್’ಆರ್’ಟಿಸಿ ಘಟಕದ ಸಮೀಪದಲ್ಲಿರುವ ಶ್ರೀ ಶಂಕರವೃತ್ತದಿಂದ ವೇದಘೋಷದೊಂದಿಗೆ, ಪೂರ್ಣಕುಂಭ ಸ್ವಾಗತದೊಂದಿಗೆ ಸ್ವಾಗತಿಸಲಾಗುವುದು ಎಂದರು.
ಮಠಕ್ಕೆ ಶ್ರೀಗಳು ಪ್ರವೇಶಿಸಿದ ಸಂದರ್ಭದಲ್ಲಿ ಧೂಳಿ ಪಾದ ಪೂಜೆ ನಡೆಯಲಿದ್ದು, ನಂತರ ಶ್ರೀಗಳಿಂದ ಆಶೀರ್ವಚನ ನಡೆಯಲಿದೆ. ರಾತ್ರಿ 8.30ಕ್ಕೆ ಶ್ರೀಗಳು ಶ್ರೀ ಶಾರದಾ ಚಂದ್ರಮೌಳೀಶ್ವರರ ಪೂಜೆ ನೆರವೇರಿಸಲಿದ್ದು, ಮಹಾಮಂಗಳಾರತಿ ನಂತರ ಪ್ರಸಾದ ವಿನಿಯೋಗ ಜರುಗಲಿದೆ ಎಂದರು.
ಶ್ರೀಗಳ ದಿವ್ಯ ಸಾನ್ನಿಧ್ಯದಲ್ಲಿ ನ.26ರಂದು ಬೆಳಿಗ್ಗೆ 9 ಗಂಟೆಯಿAದ ಶ್ರೀ ಲಲಿತಾ ಹೋಮ ಜರುಗಲಿದ್ದು, ಮಧ್ಯಾಹ್ನ 12 ಗಂಟೆಗೆ ಪೂರ್ಣಾಹುತಿ ನಡೆಯಲಿದೆ. ನಂತರ ಶ್ರೀಗಳಿಂದ ಫಲ-ಮಂತ್ರಾಕ್ಷತೆ ಅನುಗ್ರಹ ಜರುಗಲಿದೆ ಎಂದರು.
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶಾರದಾಂಬೆ ಹಾಗೂ ಶ್ರೀಗಳ ಕೃಪೆಗೆ ಪಾತ್ರರಾಗುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಿದರು.
ತಾಲೂಕು ಬ್ರಾಹ್ಮಣ ಸಂಘದ ಅಧ್ಯಕ್ಷ ಎಂ.ಎಸ್. ಜನಾರ್ಧನ ಅಯ್ಯಂಗಾರ್, ಕೆ.ಎಸ್. ನಾಗರಾಜ್, ಲಲಿತಾ ನಾಗರಾಜ್ ಹಾಗೂ ಮಠದ ವ್ಯವಸ್ಥಾಪಕ ಶಾಂತ ಕುಮಾರ್ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post