ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಗಣಪತಿ ವಿಸರ್ಜಣೆ ವೇಳೆ ಇಬ್ಬರು ಯುವಕರ ನಡುವೆ ಹಳೇ ವೈಯಕ್ತಿಕ ದ್ವೇಷದ ಹಿನ್ನಲೆಯಲ್ಲಿ ಕಳೆದ 2 ದಿನಗಳ ಹಿಂದೆ ಜಗಳ ನಡೆದಿದ್ದು, ಈ ನಡುವೆ ಓರ್ವನಿಗೆ ಜಾಕುವಿನಿಂದ ಇರಿಯಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ.
ನಗರದ ಹೊರವಲಯದ ಬೈಪಾಸ್ ರಸ್ತೆ ಸಮೀಪದಲ್ಲಿರುವ ಶಿವರಾಮ ನಗರದಲ್ಲಿ ಗಣಪತಿ ವಿಸರ್ಜನೆ ವೇಳೆ ರಾತ್ರಿ ಮಂಜುನಾಥ್ ಮತ್ತು ಮನು ಎಂಬ ಇಬ್ಬರು ಯುವಕರ ನಡುವೆ ಹಳೇ ವೈಯಕ್ತಿಕ ದ್ವೇಷದ ಹಿನ್ನಲೆಯಲ್ಲಿ ಜಗಳ ನಡೆದಿದ್ದು, ಇಬ್ಬರ ನಡುವಿನ ಜಗಳ ವಿಕೋಪಕ್ಕೆ ತಿರುಗಿ ಮಂಜುನಾಥ್‌ಗೆ ಮನು ಅಲಿಯಾಸ್ ಮನೋಜ್ ಜಾಕುವಿನಿಂದ ಇರಿದು ಪರಾರಿಯಾಗಿದ್ದನು ಎನ್ನಲಾಗಿದೆ.
Also read: ಕದ್ರಾ ಜಲಾಶಯ ಭರ್ತಿ: ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ
ಈ ಸಂಬಂಧ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post