ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನಗರದ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಮುಚ್ಚುವ ಆದೇಶ ಹಾಗೂ ಈ ಕುರಿತಂತಿನ ಪ್ರಕ್ರಿಯೆಗಳನ್ನು ವಿರೋಧಿಸಿ ನಗರದಲ್ಲಿ ಪ್ರತಿಭಟನೆಯ ಕಾವು ಹೆಚ್ಚಾಗತೊಡಗಿದೆ.
ಕಾರ್ಖಾನೆಯನ್ನು ಮುಚ್ಚು ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಗುತ್ತಿಗೆ ಕಾರ್ಮಿಕರ ಸಂಘದಿಂದ ಅನಿರ್ಧಿಷ್ಠಾವಧಿ ಮುಷ್ಕರ ಮುಂದುವರೆದಿದೆ.
ಕಾರ್ಖಾನೆ ಖಾಸಗೀಕರಣ ವಿರೋಧಿಸಿ ಕಾರ್ಮಿಕ ಸಂಘಟನೆಗಳು ಸೇರಿದಂತೆ ಕ್ಷೇತ್ರದ ವಿವಿಧ ಸಂಘ-ಸಂಸ್ಥೆಗಳು, ಮಠಮಂದಿರಗಳು, ರಾಜಕೀಯ ಪಕ್ಷಗಳು, ವಾಹನ ಚಾಲಕರು, ವ್ಯಾಪಾರಸ್ಥರು, ರೈತ ಹಾಗು ಮಹಿಳಾ ಸಂಘಟನೆಗಳು, ಗಣ್ಯರು ಸೇರಿದಂತೆ ಸಮಸ್ತ ನಾಗರೀಕರು ಸುದೀರ್ಘ ಹೋರಾಟಕ್ಕೆ ವ್ಯಾಪಕ ಬೆಂಬಲ ಸೂಚಿಸಿದ್ದರು. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಖಾಸಗೀಕರಣ ಪ್ರಕ್ರಿಯೆಯಿಂದ ಹಿಂದೆ ಸರಿದಿತ್ತು. ಅಲ್ಲದೆ ರಾಜ್ಯ ಸರ್ಕಾರ ಕಾರ್ಖಾನೆಗೆ ಅಗತ್ಯವಿರುವ ಗಣ ಸಹ ಮಂಜೂರಾತಿ ಮಾಡಿತ್ತು. ಇದೀಗ ಕಾರ್ಖಾನೆಯನ್ನು ಸಂಪೂರ್ಣವಾಗಿ ಮುಚ್ಚುವ ಹುನ್ನಾರ ನಡೆಸಲಾಗುತ್ತಿದೆ ಎಂಬ ಸುದ್ದಿ ಕಳೆದ ಒಂದು ವಾರದಿಂದ ಕ್ಷೇತ್ರದಲ್ಲಿ ಆತಂಕದ ವಾತಾವರಣ ಉಂಟು ಮಾಡಿದ್ದು, ಕಾರ್ಮಿಕ ಸಂಘಟನೆಗಳು ಹೋರಾಟಕ್ಕೆ ಮುಂದಾಗಿವೆ.
Also read: ತಾಂತ್ರಿಕ ಬದಲಾವಣೆಗಳ ಅವಶ್ಯಕತೆಗೆ ತಕ್ಕಂತೆ ಅಧ್ಯಯನ ಮುಂದುವರಿಯಲಿ: ಎಂಎಲ್’ಸಿ ಡಿ.ಎಸ್. ಅರುಣ್
ಗುತ್ತಿಗೆ ಕಾರ್ಮಿಕರ ಸಂಘ ಕಾರ್ಖಾನೆ ಮುಂಭಾಗ ಹೋರಾಟಕ್ಕೆ ಚಾಲನೆ ನೀಡಿದ್ದು, ಅನಿರ್ಧಿಷ್ಟಾವಧಿ ಹೋರಾಟಕ್ಕೆ ಕರೆ ನೀಡಿದೆ. ಕಾರ್ಖಾನೆ ಉಳಿಸಿಕೊಳ್ಳುವ ನಿಟ್ಟಿನಲ್ಲಿ ನಡೆಸುತ್ತಿರುವ ಹೋರಾಟಕ್ಕೆ ಎಲ್ಲರೂ ಸಂಪೂರ್ಣ ಸಹಕಾರ ನೀಡುವಂತೆ ಸಂಘದ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.
ಅಧ್ಯಕ್ಷರಾದ ಎಚ್.ಜಿ. ಸುರೇಶ್, ಪ್ರಮುಖರಾದ ಆರ್. ಮಂಜುನಾಥ್, ಎಸ್. ವಿನೋದ್ ಕುಮಾರ್, ಪಿ. ರಾಕೇಶ್, ವಿ. ಗುಣಶೇಖರ್, ಎನ್.ಆರ್. ವಿನಯ್ ಕುಮಾರ್, ಆಂಟೋನಿದಾಸ್, ಜ. ಆನಂದ್, ಸಮಿತಿ ಪ್ರಮುಖರಾದ ಬಿ.ಟಿ. ವಾಸುದೇದ್, ಎಂ. ಶಂಕರಲಿAಗೇಗೌಡ, ಎನ್.ಕೆ. ಮಂಜುನಾಥ್, ಪ್ರಸನ್ನ ಬಾಬು, ನಂಜೇಗೌಡ, ಜೆ. ಕಿರಣ್, ಶಿವಣ್ಣಗೌಡ, ಬಿ.ದೇವರಾಜ್, ಆರ್. ಅರುಣ್, ಪಿ. ಅವಿನಾಶ್, ಎ.ಪಿ. ಶೇಷಪ್ಪ ಗೌಡ, ಸುಬ್ರಹಣಿ ಸೇರಿದಂತೆ ಹಲವರು ಇದ್ದರು.
ಇದು ಮಾತ್ರವಲ್ಲದೇ ಸಾಮಾಜಿಕ ಜಾಲತಾಣಗಳಲ್ಲೂ ಸಹ ಕಾರ್ಖಾನೆಯನ್ನು ಉಳಿಸುವಂತೆ ಒತ್ತಡ ಹೇರಲಾಗುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post