ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ವಿದ್ಯಾರ್ಥಿಗಳು ಕಲಿಕೆಗೆ ಹೆಚ್ಚಿನ ಆಸಕ್ತಿ ನೀಡುವ ಜೊತೆಗೆ ಉತ್ತಮ ಗುಣಗಳನ್ನು ರೂಢಿಸಿಕೊಳ್ಳಬೇಕೆಂದು ಶಾಸಕ ಬಿ.ಕೆ. ಸಂಗಮೇಶ್ವರ್ MLA B K Sangameshwar ಹೇಳಿದರು.
ಅವರು ಗಾಂಧಿನಗರ ಕುವೆಂಪು ಬಡಾವಣೆಯಲ್ಲಿರುವ ಸ್ವಾಮಿ ವಿವೇಕಾನಂದ ಎಜುಕೇಷನ್ ಟ್ರಸ್ಟ್‌ನ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ ಹಿರಿಯ ಪ್ರಾಥಮಿಕ ಪಾಠಶಾಲೆ ಹಾಗು ಆಂಗ್ಲ ಮಾಧ್ಯಮ ಪ್ರೌಢಶಾಲೆ ೨೫ನೇ ವರ್ಷದ ಶಾಲಾ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಜವಾಬ್ದಾರಿ ಶಿಕ್ಷಕರು ಮತ್ತು ಪೋಷಕರದ್ದಾಗಿದ್ದು, ಈ ಹಿನ್ನಲೆಯಲ್ಲಿ ಹೆಚ್ಚಿನ ಗಮನ ಹರಿಸಬೇಕು ಎಂದರು.
Also read: ಮೂತ್ರ ವಿಸರ್ಜನೆಗೆ ಇಳಿದ ಪತ್ನಿಯನ್ನೇ ಕಾಡಿನಲ್ಲಿ ಮರೆತು 150 ಕಿಮೀ ತೆರಳಿದ ಪತಿರಾಯ: ಮುಂದೇನಾಯ್ತು?
ವಿದ್ಯಾಸಂಸ್ಥೆ ಅಧ್ಯಕ್ಷ ಎಚ್.ಎಸ್. ಗುರುರಾಜರಾವ್ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ. ನಾಗೇಂದ್ರಪ್ಪ, ಸಂಪನ್ಮೂಲ ಸಮನ್ವಯಾಧಿಕಾರಿ ಪಂಚಾಕ್ಷರಿ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ಹಿರಿಯ ಸದಸ್ಯರಾದ ವಿ. ಕದಿರೇಶ್, ಬಿ.ಕೆ ಮೋಹನ್, ತಿಪ್ಪೇಸ್ವಾಮಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post