ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ನಗರಸಭೆ ಚುನಾವಣೆಯನ್ನು ತಾಲೂಕು, ಜಿಲ್ಲೆ ಹಾಗೂ ರಾಜ್ಯಮಟ್ಟದ ಬಿಜೆಪಿ ಕಾರ್ಯಕರ್ತರು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದೇವೆ ಎಂದು ಹೊಳಲೂರು ಜಿಪಂ ಸದಸ್ಯ ಕೆ.ಈ. ಕಾಂತೇಶ್ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಜೈ ಶ್ರೀರಾಮ್ ಘೋಷಣೆಯೊಂದಿಗೆ ಮಾತನ್ನು ಆರಂಭಿಸಿದ ಅವರು, ಅಭಿವೃದ್ಧಿಯಲ್ಲಿ ಕುಂಠಿತವಾಗಿರುವ ತಾಲೂಕನ್ನು ಅಭಿವೃದ್ಧಿ ಪತದತ್ತ ಕೊಂಡೊಯ್ಯುವುದು ನಮ್ಮ ಮೂಲ ಉದ್ದೇಶವಾಗಿದೆ ಎಂದಿದ್ದಾರೆ.
ಮನೆ-ಮನೆ ಪ್ರಚಾರ ನಡೆಸಿ ಸಂತಸ ವ್ಯಕ್ತಪಡಿಸಿದ ಅವರು, ಪ್ರಸಕ್ತ ನಗರಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷವೇ ಅಧಿಕಾರದ ಚುಕ್ಕಾಣಿ ಹಿಡಿಯುವ ಸಂಪೂರ್ಣ ಭರವಸೆ ಇದೆ. ತಾಲೂಕಿನಲ್ಲಿ ಹಿಂದುತ್ವದ ಪರವಾಗಿರುವ ಎಲ್ಲರಿಗೂ ವ್ಯಕ್ತಿಗೂ ಬೆಲೆ ದೊರಕಿಸಿಕೊಡುವ ದೃಷ್ಟಿಯಿಂದ ಪ್ರತಿಯೊಬ್ಬ ಕಾರ್ಯಕರ್ತನಿಗೂ ಬೆಂಬಲ ನೀಡಲಿದ್ದು, ಭದ್ರಾವತಿಯಲ್ಲಿ ಅಭಿವೃದ್ಧಿ ಕಾರ್ಯಗಳು ಸರಾಗವಾಗಿ ಸಾಗಲು ಬಿಜೆಪಿಯನ್ನು ಬೆಂಬಲಿಸಬೇಕು ಎಂದು ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post