ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ, ಹೋರಾಟಗಾರ ಆರ್. ವೇಣುಗೋಪಾಲ್ ಭಾನುವಾರ ಲಸಿಕೆ ಪಡೆಯುವ ಮೂಲಕ ಇತರರಿಗೆ ಜಾಗೃತಿ ಮೂಡಿಸಿದರು.
ಕೊರೋನಾ ಸೋಂಕು ಎರಡನೆಯ ಅಲೆ ವೇಗವಾಗಿ ಎಲ್ಲೆಡೆ ವ್ಯಾಪಿಸುತ್ತಿದೆ. ಲಸಿಕೆ ಪಡೆಯುವವರ ಸಂಖ್ಯೆ ಸಹ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸರ್ಕಾರ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೋನಾ ಲಸಿಕೆ ಉಚಿತವಾಗಿ ನೀಡುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳುವ ಮೂಲಕ ಸೋಂಕು ಹರಡದಂತೆ ಮುನ್ನಚ್ಚರಿಕೆ ಕ್ರಮಗಳನ್ನು ವಹಿಸಬೇಕು ಎಂದರು.
ಜನ್ನಾಪುರ ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಆರ್. ಕವಿತಾ , ಕಿರಣ್ ಕುಮಾರ್, ದೇವರಾಜ್, ಮಂಗಳ, ಉಷಾ ಹಾಗೂ ಆಶಾ ಕಾರ್ಯಕರ್ತೆಯರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
















