ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ತಂಬಾಕು ಹಾಗೂ ಸಿಗರೇಟು ವರ್ಜಿಸುವಂತೆ ಹಾಗೂ ಈ ಮೂಲಕ ಆರೋಗ್ಯ ಸಮಾಜಕ್ಕೆ ಸಹಕಾರ ನೀಡಬೇಕು ಎಂಬ ಕಾರಣದಿಂದ ತಾಲೂಕಿನ ಅಧಿಕಾರಿಗಳು ಸಾರ್ವಜನಿಕರಿಗೆ ಗುಲಾಬಿ ನೀಡುವ ಮೂಲಕ ಅರಿವು ಮೂಡಿಸಿದರು.
ನಗರದ ವಿವಿಧ ವೃತ್ತಗಳಲ್ಲಿ ಹಾಗೂ ಅಂಗಡಿ-ಮುಗ್ಗಟ್ಟುಗಳಲ್ಲಿ ತಂಬಾಕು, ಸಿಗರೇಟ್ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲು ಅರೋಗ್ಯ ಇಲಾಖೆ, ತಾಲೂಕು ಆಡಳಿತ, ನಗರಸಭೆ ಸೇರಿದಂತೆ ಆಶಾ ಕಾರ್ಯಕರ್ತರು ಸಾರ್ವಜನಿಕರಿಗೆ ಗುಲಾಬಿ ಹೂವು ನೀಡಿ ಅರಿವು ಮೂಡಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಸಂತೋಷ್ ಕುಮಾರ್, ಪೌರಾಯುಕ್ತ ಮನೋಹರ್, ಹಳೆನಗರ ಪೊಲೀಸ್ ಸಬ್ ಇನ್ಸ್’ಪೆಕ್ಟರ್ ಶ್ರೀನಿವಾಸ, ಅರೋಗ್ಯ ಇಲಾಖೆಯ ಟಿಎಚ್’ಓ ಡಾ.ಎಂ.ಆರ್. ಗಾಯಿತ್ರಿ, ತಂಬಾಕು ನಿಯಂತ್ರಣಾಧಿಕಾರಿಗಳು, ಹಿರಿಯ ಅರೋಗ್ಯ ಸಹಾಯಕ ನಿಲೇಶ್ ರಾಜ್, ರಾಜೇಗೌಡ, ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post