ಕಲ್ಪ ಮೀಡಿಯಾ ಹೌಸ್ | ಗೋಣಿಬೀಡು(ಭದ್ರಾವತಿ) |
ಧಾರ್ಮಿಕ ಕಟ್ಟಡಗಳ ಧ್ವಂಸ ವಿಚಾರದಲ್ಲಿ ಬಿಜೆಪಿ ತನ್ನ ತಪ್ಪನ್ನು ಮುಚ್ಚಿಕೊಳ್ಳಲು ವಿಧೇಯಕ ಜಾರಿಗೆ ತರಲು ಹೊರಟಿದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತಂತೆ ಮಾತನಾಡಿದ ಅವರು, ಬಿಜೆಪಿ ಒಂದು ಕಡೆ ಹಿಂದುತ್ವದ ತತ್ವಗಳನ್ನು ಹೇಳಿಕೊಂಡು ರಾಜಕೀಯ ಮಾಡುತ್ತಿದೆ. ಮತ್ತೊಂದು ಕಡೆ ಅವರದ್ದೇ ಸರ್ಕಾರದ ಅವಧಿಯಲ್ಲಿ ದೇವಸ್ಥಾನ ಒಡೆಯಲಾಗುತ್ತಿದೆ. ಇದನ್ನು ಗಮನಿಸಿದರೆ ಬಿಜೆಪಿ ತನ್ನ ತಪ್ಪನ್ನು ಮುಚ್ಚಿಕೊಳ್ಳಲು ವಿಧೇಯಕ ಜಾರಿಗೆ ಮುಂದಾಗಿದೆ ಎನಿಸುತ್ತದೆ ಎಂದರು.
ವಿಧೇಯಕ ತರಲು ಹೊರಟಿರುವ ಮೊದಲೇ ಇವರು ಎಚ್ಚೇತ್ತುಕೊಳ್ಳಬೇಕಿತ್ತು. ಆದರೆ ಈಗ ವಿಧೇಯಕದ ಮೂಲಕ ಈ ರೀತಿ ಹೈಡ್ರಾಮಾ ನಡೆಸುತ್ತಿರುವುದು ಬಿಜೆಪಿಯ ಬಣ್ಣವನ್ನು ಬಯಲು ಮಾಡಿದೆ ಎಂದು ಕಿಡಿಕಾರಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post