ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು CM Basavaraja Bommai ಮಂಡಿಸಿರುವ ಪ್ರಸ್ತುತ ಸಾಲಿನ ಬಜೆಟ್ ಸಮಾಧಾನಕರವಾಗಿದೆ ಎಂದು ಆಮ್ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್ ತಿಳಿಸಿದ್ದಾರೆ.
ಆಮ್ ಆದ್ಮಿ ಪಕ್ಷದ ದೆಹಲಿ ಸರ್ಕಾರ ಬಡ ವರ್ಗದವರಿಗೆ ಗುಣಮಟ್ಟದ ಆರೋಗ್ಯ ನೀಡುವ ಹಿನ್ನಲೆಯಲ್ಲಿ ಮೊಹಲ್ಲಾ ಕ್ಲಿನಿಕ್‌ಗಳನ್ನು ಆರಂಭಿಸಿದೆ. ಇದೇರೀತಿ ಇದೀಗ ರಾಜ್ಯದಲ್ಲಿ ಪ್ರತಿ ವಾರ್ಡ್‌ಗಳಲ್ಲಿ ಕ್ಲಿನಿಕ್ ಆರಂಭಿಸುವ ಕುರಿತು ಬಜೆಟ್‌ನಲ್ಲಿ ಪ್ರಸ್ತಾಪಿಸಿರುವುದು ಸ್ವಾಗತಾರ್ಹ ವಿಚಾರವಾಗಿದೆ.

ಈ ಹಿನ್ನಲೆಯಲ್ಲಿ ಸರ್ಕಾರಕ್ಕೆ ಪಕ್ಷದ ವತಿಯಿಂದ ಕೃತಜ್ಞತೆ ಸಲ್ಲಿಸುತ್ತೇನೆ. ಜೊತೆಗೆ ತಕ್ಷಣ ಕ್ಲಿನಿಕ್‌ಗಳನ್ನು ಆರಂಭಿಸುವಂತೆ ಮನವಿ ಮಾಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















