ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ತೋಟದಲ್ಲಿ ಕೆಲಸ ಮಾಡುತ್ತಿದ್ದ ತಂದೆಯನ್ನು ತಿಂಡಿಗೆ ಕರೆಯಲು ಬಂದ ಮಗನ ತಲೆಯ ಮೇಲೆ ವಿದ್ಯುತ್ ತಂತಿ ಬಿದ್ದು ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಅರಹತೋಳಲಿನಲ್ಲಿ ನಡೆದಿದೆ.
ಮಂಜಪ್ಪ ಎಂಬುವವರ ಮಗ ನಿತೀನ್ (ಮಹೇಶ್) ಮೃತ ದುರ್ದೈವಿಯಾಗಿದ್ದು, ಕಲ್ಲಿಹಾಳ್‌ನ ಶ್ರೀ ಮಂಜುನಾಥ ಪ್ರೌಢಶಾಲೆಯಲ್ಲಿ 8ನೆಯ ತರಗತಿ ಓದುತ್ತಿದ್ದ ಎನ್ನಲಾಗಿದೆ.
ವಿದ್ಯುತ್ ತಂತಿ ತುಂಡಾಗಿ ಆತನ ಮೇಲೆ ಬಿದ್ದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಈ ಸಂದರ್ಭದಲ್ಲಿ ಹೊಳೆಹೊನ್ನೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಶೀಲನೆ ನಡೆಸಿದರು. ಮೆಸ್ಕಾಂನ ಲೈನ್‌ಮ್ಯಾನ್ ಹಾಗೂ ಇಂಜಿನಿಯರ್‌ಗಳನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡ ಬಗ್ಗೆ ವರದಿಯಾಗಿದೆ.
ವಿದ್ಯುತ್ ತಂತಿಗೆ ಬಾಳಿಕೆಯ ಶಕ್ತಿ ಕುಂದಿತ್ತು ಎಂದು ತಿಳಿದುಬಂದಿದ್ದು, ಈ ಬಗ್ಗೆ ಸಮಗ್ರ ಪರಿಶೀಲನೆ ಅಗತ್ಯವಿದೆ. ಇಂಜಿನಿಯರ್‌ಗಳ ಕರ್ತವ್ಯ ಇಲ್ಲಿ ಪ್ರಶ್ನೆಗೆ ಎಡೆಮಾಡಿಕೊಟ್ಟಿದೆ. ಬಾಲಕನ ಅಸಹಜ ಸಾವಿಗೆ ಇಡೀ ಗ್ರಾಮ ಕಂಬನಿ ಮಿಡಿದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post