ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಇಲ್ಲಿನ ಹೊಸ ಸೇತುವೆ ರಸ್ತೆಯಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಭಾರೀ ಅಗ್ನಿ ಅನಾಹುತದ ಪರಿಣಾಮ ಸಾಮಿಲ್ ಮಾಲೀಕರಿಗೆ ಹಾಗೂ ಅಕ್ಕಪಕ್ಕದ ಕಟ್ಟಡಗಳಿಗೂ ಸಹ ತೀವ್ರ ಹಾನಿಯಾಗಿದ್ದು, ಸರ್ಕಾರ ಇವರಿಗೆಲ್ಲಾ ಪರಿಹಾರ ನೀಡಬೇಕು ಎಂದು ಶಾಸಕ ಬಿ.ಕೆ. ಸಂಗಮೇಶ್ವರ ಒತ್ತಾಯಿಸಿದರು.
ನಿನ್ನೆ ರಾತ್ರಿ ಸಂಭವಿಸಿದ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪರಿಶೀಲನೆ ನಡೆಸಿದ ನಂತರ ಕಲ್ಪ ಮೀಡಿಯಾ ಹೌಸ್ ಜೊತೆಯಲ್ಲಿ ಮಾತನಾಡಿದ ಅವರು, ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ತಿಳಿದುಬಂದಿಲ್ಲ. ಆದರೆ, ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಅಪಾರ ಪ್ರಮಾಣದ ನಾಟಾ, ಅಕ್ಕಪಕ್ಕದ ಹಲವು ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಅಲ್ಲದೇ, ಮನೆ ಹಾಗೂ ವಾಣಿಜ್ಯ ಕಟ್ಟಡಗಳೂ ಸಹ ಹಾನಿಯಾಗಿದ್ದು, ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಸರ್ಕಾರ ಇದನ್ನು ಪರಿಶೀಲನೆ ನಡೆಸಿ, ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಘಟನೆ ಕುರಿತಂತೆ ಪೂರ್ಣ ಮಾಹಿತಿ ತರಿಸಿಕೊಳ್ಳುತ್ತೇನೆ. ನಷ್ಟ ಅನುಭವಿಸಿದ ವ್ಯಾಪಾರಸ್ತರು ಹಾಗೂ ಮನೆ ಮಾಲೀಕರೊಂದಿಗೆ ನಾವಿದ್ದೇವೆ. ಯಾವುದೇ ಕಾರಣಕ್ಕೂ ಧೈರ್ಯಗೆಡಬೇಡಿ ಎಂದು ಆತ್ಮಸ್ಥೈರ್ಯ ತುಂಬಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post