ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ಕೊರೋನಾ ತುರ್ತು ಸಂದರ್ಭದಲ್ಲಿ ಮುಂದಿನ ಎರಡು ತಿಂಗಳು ಉಚಿತ ಪಡಿತರ, ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ಐದು ಸಾವಿರ ರೂ. ಸಹಾಯ ಧನ ನೀಡಲಾಗುವುದು ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ ಮಾಡುವ ಮೂಲಕ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ದೇಶಕ್ಕೆ ಮಾದರಿಯಾಗಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಹೆಚ್. ರವಿಕುಮಾರ್ ತಿಳಿಸಿದ್ದಾರೆ.
ಕೊರೋನಾ ನಿಯಂತ್ರಣಕ್ಕಾಗಿ ದೆಹಲಿಯಲ್ಲಿ ಲಾಕ್‌ಡೌನ್ ಜಾರಿಗೆ ತರಲಾಗಿದ್ದು, ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಈ ಹಿನ್ನೆಲೆ ಸರ್ಕಾರ ಜನರ ನೆರವಿಗೆ ಧಾವಿಸಿದೆ. ಆದರೆ ರಾಜ್ಯದಲ್ಲಿ ಇನ್ನು ಯಾವುದೇ ಯೋಜನೆ ಘೋಷಣೆಯಾಗಿಲ್ಲ ಎಂದು ಹೇಳಿದ್ದಾರೆ.
ದೆಹಲಿಯ 72 ಲಕ್ಷ ಪಡಿತರ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಉಚಿತವಾಗಿ ರೇಷನ್ ಸಿಗಲಿದ್ದು, ಎಲ್ಲಾ ಆಟೋ, ಟ್ಯಾಕ್ಸಿ ಚಾಲಕರಿಗೆ ಐದು ಸಾವಿರ ರೂಪಾಯಿ ಘೋಷಿಸಿರುವುದರಿಂದ ಸುಮಾರು ಒಂದೂವರೆ ಲಕ್ಷ ಜನರಿಗೆ ಆರ್ಥಿಕ ಸಹಾಯ ಸಿಗಲಿದೆ ಎಂದಿದ್ದಾರೆ.
ಕಳೆದ ವಾರವೂ ಕೇಜ್ರಿವಾಲ್ ಸರ್ಕಾರ ಕಾರ್ಮಿಕ ವರ್ಗಕ್ಕೂ ನೆರವು ನೀಡಿದ್ದರು. ದೆಹಲಿ ಕೊರೊನಾ ಸಂಕಷ್ಟದಲ್ಲಿದ್ದು, ಆರ್ಥಿಕವಾಗಿ ಸದೃಢರಾಗಿರುವ ಸಶಕ್ತರು ಸಹಾಯಕ್ಕೆ ಮುಂದಾಗಬೇಕು. ನಿಮ್ಮ ಸಾಮರ್ಥ್ಯಕ್ಕನುಗುಣವಾಗಿ ಅವಶ್ಯಕತೆ ಇರುವವರಿಗೆ ಊಟ ತಲುಪಿಸಿ ಎಂದು ಕೇಜ್ರಿವಾಲ್ ಮನವಿ ಮಾಡಿಕೊಂಡಿದ್ದರು ಎಂದು ತಿಳಿಸಿದ್ದಾರೆ.
ಆಂಧ್ರ ಸಿಎಂ ಹೊಸ ಭರವಸೆ:
ಆಂಧ್ರ ಸಿಎಂ ಜಗನ್ ಕೂಡ ಮನೆ ಬಾಗಿಲಿಗೆ ಸೌಲಭ್ಯ ತಲುಪಿಸುತ್ತಿದ್ದಾರೆ. ಈ ನಡೆ ಎಲ್ಲಾ ಮುಖ್ಯಮಂತ್ರಿಗಳಿಗೂ ಮಾದರಿಯಾಗಿದೆ. ಆದ್ದರಿಂದ ನಮ್ಮ ರಾಜ ಸರ್ಕಾರವೂ ಸಹ ತಕ್ಷಣವೇ ಈ ಮೇಲ್ಕಂಡ ರಾಜ್ಯಗಳ ಮಾದರಿ ಅಳವಡಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post