ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನರೇಗಾ ಯೋಜನೆಯಿಂದ ನಮ್ಮ ಇಲಾಖೆಗೆ ಬಹಳಷ್ಟು ಅನುಕೂಲವಾಗಿದೆ. ವಿಶೇಷವಾಗಿ ಗ್ರಾಮೀಣ ಭಾಗದ ದುಡಿಯುವ ಕೈಗಳಿಗೆ ಉದ್ಯೋಗದ ಖಾತ್ರಿ ನೀಡಿದಂತಾಗಿದೆ, ಮುಂದಿನ ದಿನಗಳಲ್ಲಿ ನರೇಗಾ ಯೋಜನೆಯಡಿ ಬರುವ ಇನ್ನಷ್ಟು ಕಾಮಗಾರಿಗಳನ್ನು ಬಳಸಿಕೊಳ್ಳಲು ಯೋಜನೆ ರೂಪಿಸಿದ್ದು, ಸಂಬಂಧಿಸಿದ ಅಧಿಕಾರಿಗಳು ಸೂಕ್ತವಾಗಿ ಸ್ಪಂದಿಸುವ ಭರವಸೆ ದೊರಕಿದೆ ಎಂದು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪವಿತ್ರ ರಾಮಯ್ಯ ಹೇಳಿದರು.

ತಾಲ್ಲೂಕು ಹಾತಿಕಟ್ಟೆ ಗ್ರಾಮದಲ್ಲಿ ಹಾದು ಹೋಗಿರುವ ಬಸಾಪುರ ಡಿಸ್ಟ್ರಿಬ್ಯೂಟರ್ 27ರ ಬಲ ನಾಲೆಯಲ್ಲಿ ತುಂಬಿರುವ ಹೂಳು ಹಾಗೂ ಜಂಗಲ್ ಸ್ವಚ್ಚಗೊಳಿಸಲು ಗ್ರಾಮ ಪಂಚಾಯಿತಿ ವತಿಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೆತ್ತಿಕೊಂಡಿರುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅವರು ಮಾತನಾಡಿದರು.

ನಂತರ ಭದ್ರಾವತಿ ತಾಲ್ಲೂಕಿನ ಕಾಗೆಕೊಡಮಗ್ಗಿ ಗ್ರಾಮದಲ್ಲಿ ನಡೆಯುತ್ತಿರುವ ನರೇಗಾ ಕಾಮಗಾರಿ ವೀಕ್ಷಣೆ ಮಾಡಲಾಯಿತು. ಈ ಸಮಯದಲ್ಲಿ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ರಾಘವೇಂದ್ರ, ನೀರಾವರಿ ಇಲಾಖೆಯ ಸಹಾಯಕ ಅಭಿಯಂತರರಾದ ಉಮೇಶ್, ನೀರು ಬಳಕೆದಾರ ಸಂಘದ ಕಾರ್ಯದರ್ಶಿಗಳಾದ ರವಿ, ಗ್ರಾಮ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















