ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನಗರದ ಮಿತ್ರ ಕಲಾ ಮಂಡಳಿ ವತಿಯಿಂದ ಸಂಘದ ಸಹಾಯಾರ್ಥ ನ್ಯೂಟೌನ್ ಶಾರದ ಮಂದಿರದಲ್ಲಿ ಆಯೋಜಿಸಲಾಗಿದ್ದ ನಾಟಕ ಪ್ರದರ್ಶನ ಪ್ರೇಕ್ಷಕರ ಮನಸೂರೆಗುಂಡಿತು.
ರಂಗಕರ್ಮಿ, ಕಿರುತೆರೆ, ಚಲನಚಿತ್ರ ನಟ ಅಪರಂಜಿ ಶಿವರಾಜ್ ವಿನ್ಯಾಸ ಮತ್ತು ನಿರ್ದೇಶನದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಚಂದ್ರಶೇಖರ್ ಕಂಬಾರರ ಜಾನಪದ ನಾಟಕ `ಸಂಗ್ಯಾ ಬಾಳ್ಯಾ’ ನಾಟಕ ಪ್ರದರ್ಶನವನ್ನು ಪ್ರಶಾಂತಿ ಸೇವಾ ಟ್ರಸ್ಟ್ ಅಧ್ಯಕ್ಷ ಡಿ. ಪ್ರಭಾಕರ ಬೀರಯ್ಯ ಉದ್ಘಾಟಿಸಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕ ಎಚ್. ಉಮೇಶ್, ವಾರ್ತಾ ಮತ್ತು ಪ್ರಚಾರ ಇಲಾಖೆ ಸಹಾಯಕ ನಿರ್ದೇಶಕಿ ಭಾಗ್ಯಮ್ಮ, ಉದ್ಯಮಿ ಬಿ.ಕೆ ಜಗನ್ನಾಥ, ಶ್ರೀ ಸತ್ಯಸಾಯಿಬಾಬಾ ಸಮಗ್ರ ಶಿಕ್ಷಣ ಸಂಸ್ಥೆ ಶಿಕ್ಷಣ ಸಂಯೋಜಕ ಜಿ.ಪಿ ಪರಮೇಶ್ವರಪ್ಪ, ನವೋದಯ ಕಲಾ ಸಂಘದ ಅಧ್ಯಕ್ಷ ಬಸಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಕಲಾವಿದರು ತಮ್ಮ ಕಲಾ ಪ್ರತಿಭೆ ಮೂಲಕ ಅಭಿನಯಕ್ಕೆ ಜೀವಂತಿಕೆ ತುಂಬಿದ್ದರು. ಈ ಮೂಲಕ ಇನ್ನೂ ರಂಗ ಕಲಾವಿದರು ಉಕ್ಕಿನ ನಗರದಲ್ಲಿದ್ದಾರೆಂದು ಸಾಬೀತುಪಡಿಸಿದರು. ಪ್ರದರ್ಶನಕ್ಕೆ ನವೋದಯ ಕಲಾ ಸಂಘ ಸಹಕಾರ ನೀಡಿತ್ತು.
ಪ್ರಾತಧಾರಿಗಳಾಗಿ ಸಂಗ್ಯಾ-ಜೆ. ಭಾನುಪ್ರಕಾಶ್, ಬಾಳ್ಯಾ-ಎ.ಜಿ ಫ್ರಾನ್ಸಿಸ್, ಮೇಟಿತಾಳ-ವಿ. ಹಿರೇಮಠ್, ಈರ್‍ಯಾರಗಳೆ-ಭಾನುಪ್ರಕಾಶ್ ಬಾಬು, ಇರಪಕ್ಷಿ-ಎಸ್.ದೀಪಕ್, ಬಸವಂತ-ಬಿ.ಎಸ್ ಮಲ್ಲಿಕಾರ್ಜುನ್, ಮಾರವಾಡಿ-ಶಿವಮಹಾದೇವ, ಪೋಸ್ಟ್‌ಮ್ಯಾನ್-ಎಂ.ಎ ಬೆನಕೇಗೌಡ, ಬ್ಯಾಗರಿ-ಎಂ.ಕೆ ರಾಘವೇಂದ್ರ, ಆಳು-ಜಗದೀಶ್ವರಚಾರಿ, ಗಂಗಾ-ಪ್ರಿಯಾ ನಾಗರಾಜ್, ಪರಮ್ಮ-ಎಸ್. ಸರೋಜಮ್ಮ ಹಾಗು ಮಾಸ್ಟರ್ ಪ್ರತೀಕ್ ಡಿ. ಅಭಿನಯಿಸಿದ್ದರು.
ಬಿ.ಕೆ. ಮೋಹನ್ ಕುಮಾರ್ ಮತ್ತು ಡಿ.ಆರ್ ಹರೀಶ್-ಸಂಗೀತ, ಜಗದೀಶ್ವರಚಾರಿ-ಬೆಳಕು, ಎಂ.ಕೆ ರಾಘವೇಂದ್ರ ಮತ್ತು ವಿ. ಹಿರೇಮಠ್-ಅಲಂಕಾರ, ಮೇಳ-ಜಿ. ದಿವಾಕರ, ವಿ.ಎ ಮಾರ್ಟಿನ್, ಕೆ.ಕೆ ಸಾಯಿಕೃಷ್ಣ, ಜಿ.ಆರ್ ಭಾರ್ಗವಿ, ಸಿ.ಎಚ್ ಪುಷ್ಪಲತಾ ಮತ್ತು ಎಚ್.ಆರ್ ಸುಧಾ ಕಾರ್ಯ ನಿರ್ವಹಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post