ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಂಡು ಅಂಚೆ ಇಲಾಖೆ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಗ್ರಾಹಕರನ್ನು ಆಕರ್ಷಿಸುತ್ತಿದೆ ಎಂದು ಕುವೆಂಪು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ವಿಭಾಗದ ಆಡಳಿತಾಧಿಕಾರಿ ಪ್ರೊ. ಸಿ.ಎಂ. ತ್ಯಾಗರಾಜ್ ಹೇಳಿದರು.
ನಗರದ ಪ್ರಧಾನ ಅಂಚೆ ಕಛೇರಿಯಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವ್ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಅಂಚೆ ಸಪ್ತಾಹ ಉದ್ಘಾಟಿಸಿ ಮಾತನಾಡಿದ ಅವರು, ಅಂಚೆ ಇಲಾಖೆ ಇಂದಿಗೂ ತನ್ನ ಅಸ್ತಿತ್ವವನ್ನು ಉಳಿಸಿಕೊಂಡಿರುವುದು ಹೆಮ್ಮೆಯ ವಿಚಾರವಾಗಿದ್ದು, ಸಿಬ್ಬಂದಿಗಳು ಕಾರ್ಯ ನಿರ್ವಹಣೆಯಲ್ಲಿ ಇನ್ನೂ ಹೆಚ್ಚಿನ ಗಮನ ಹರಿಸಬೇಕು. ಸಾರ್ವಜನಿಕ ವಲಯಗಳು ಅಭಿವೃದ್ಧಿ ಪಥದಲ್ಲಿ ಸಾಗಲು ಹೊಸ ಹೊಸ ಅವಿಷ್ಕಾರಗಳು ನಡೆಯಬೇಕು ಎಂದು ಸಲಹೆ ನೀಡಿದರು.
‘ಡಿ’ ಗ್ರೂಪ್ ನೌಕರರ ವಿಭಾಗದಲ್ಲಿ ಅತ್ಯುತ್ತಮ ಕರ್ತವ್ಯ ನಿರ್ವಹಣೆಯಲ್ಲಿ ದಾನಿಷ್ ಪಟೇಲ್, ಅತ್ಯುತ್ತಮ ವಿಲೇವಾರಿಗಾಗಿ ಪೋಸ್ಟ್ ಮ್ಯಾನ್ ವಿಭಾಗದಲ್ಲಿ ಎಚ್.ವಿ. ರಾಜ್‌ಕುಮಾರ್, ಇದೆ ವಿಭಾಗದಲ್ಲಿ ಎಚ್. ಗೀತಾ, ಪೋಸ್ಟ್‌ಮ್ಯಾನ್ ವಿಭಾಗದ ಅಂಚೆ ವಿಂಗಡಣೆಯಲ್ಲಿ ಡಿ. ಗೋವಿಂದರಾಜು, ಹೆಚ್ಚಿನ ಆರ್ಥಿಕ ನಿರ್ವಹಣೆಯಲ್ಲಿ ಉದಯಚಾರ್, ಎಚ್. ಮಂಜುನಾಥ್, ಉತ್ತಮ ಹಾಜರಾತಿಯಲ್ಲಿ ಪೋಸ್ಟಲ್ ಅಸಿಸ್ಟೆಂಟ್ ವಿಭಾಗದಲ್ಲಿ ವಿದ್ಯಾ ಕೃಷ್ಣ ಮತ್ತು ಬಿ.ಸಿ ರಾಘವೇಂದ್ರ, ಉತ್ತಮ ಎನ್‌ಎಸ್‌ಸಿ ಏಜೆಂಟ್ ಎಸ್.ಕೆ. ಗಣೇಶ್ ಮತ್ತು ಆರ್.ಡಿ. ಏಜೆಂಟ್ ಲಕ್ಷ್ಮಮ್ಮ ಬಹುಮಾನಗಳನ್ನು ಪಡೆದುಕೊಂಡರು.
ಕಾರ್ಯಕ್ರಮದಲ್ಲಿ ಪ್ರಧಾನ ಅಂಚೆ ಕಚೇರಿ ಪೋಸ್ಟ್ ಮಾಸ್ಟರ್ ವಿ. ಶಶಿಧರ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಅಂಚೆ ಅಧೀಕ್ಷಕ ಜಿ. ಹರೀಶ್, ಆಯುಷ್ ಇಲಾಖೆಯ ಹಿರಿಯ ವೈದ್ಯಾಧಿಕಾರಿ ಡಾ. ಅನಿಲ್‌ಕುಮಾರ್, ಅಂಚೆ ನಿರೀಕ್ಷಕ ಪ್ರಹ್ಲಾದನಾಯಕ್, ವಿಜಯಕುಮಾರ್, ನಾಗರಾಜ್, ಎಂ. ಪೂಜಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post