ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ VISL Factory ಕಂಪ್ಯೂಟರ್ ಮತ್ತು ಮಾಹಿತಿ ತಂತ್ರಜ್ಞಾನ ವಿಭಾಗದ ಹಿರಿಯ ವ್ಯವಸ್ಥಾಪಕ ನಿತಿನ್ ಜೋಸ್ ಅವರಿಗೆ 2020-21ನೆಯ ಸಾಲಿನ ಪ್ರತಿಷ್ಠಿತ ಸೈಲ್ ಕಾರ್ಪೊರೇಟ್ ಅವಾರ್ಡ್ ಫಾರ್ ಎಕ್ಸಲೆನ್ಸ್-ರೋಲ್ ಮಾಡೆಲ್ ಅವಾರ್ಡ್ ವಿಭಾಗದಲ್ಲಿ ಪ್ರಶಸ್ತಿ ಲಭಿಸಿದೆ.
ನಿತಿನ್ ಅವರು 2008ರಲ್ಲಿ ಸೇವೆಗೆ ಸೇರ್ಪಡೆಗೊಂಡಿದ್ದು, ಇವರು ಬ್ಯಾಡ್ಮಿಂಟನ್ ಆಟಗಾರರು ಸಹ ಆಗಿದ್ದಾರೆ.
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭಾರತೀಯ ಉಕ್ಕು ಪ್ರಾಧಿಕಾರದ ಅಧ್ಯಕ್ಷೆ ಸೋಮ ಮಂಡಲ್ ಪ್ರಶಸ್ತಿ ವಿತರಿಸಿದರು. ಪ್ರಶಸ್ತಿ ರೂ. 50 ಸಾವಿರ ನಗದು ಮತ್ತು ಪ್ರಮಾಣ ಪತ್ರ ಒಳಗೊಂಡಿದೆ.
Also read: ಶಿಕಾರಿಪುರದ ಕೆ.ವಿ. ನರಸಪ್ಪನವರ ಬದುಕು, ಸಾಧನೆ ಕುರಿತಾಗಿನ ಪುಸ್ತಕ ನಾಳೆ ಬಿಡುಗಡೆ
ಇವರಿಗೆ ಕಾರ್ಖಾನೆ ಆಡಳಿತ ಮಂಡಳಿ, ಅಧಿಕಾರಿಗಳು, ಕಾರ್ಮಿಕರು ಅಭಿನಂದಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post