ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಮತ್ತು 33 ಕೆ.ವಿ ಮಾರ್ಗ/ಅಂತರಗಂಗೆ ಫೀಡರ್ ನಿರ್ವಹಣೆ ಕಾಮಗಾರಿ ಹಿನ್ನಲೆಯಲ್ಲಿ ನ.27ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
11 ಕೆವಿ ಮಾರ್ಗದ ದೊಡ್ಡೇರಿ, ಅಂತರಗಂಗೆ, ಕಾಚಗೊಂಡನಹಳ್ಳಿ, ಯರೇಹಳ್ಳಿ, ದೇವನರಸೀಪುರ, ಕಾರೇಹಳ್ಳಿ, ಕಾಳಿಂಗನಹಳ್ಳಿ, ಬೊಮ್ಮೇನಹಳ್ಳಿ, ಬಾರಂದೂರು, ಮಾವಿನಕೆರೆ, ಕೆಂಚೇನಹಳ್ಳಿ, ಶ್ರೀನಿವಾಸಪುರ, ಶವಪುರ, ಉಕ್ಕುಂದ, ಗಂಗೂರು ಗ್ರಾಮ ಪಂಚಾಯಿತಿ ವ್ಯಾಪಿಯ ಎಲ್ಲಾ ಗ್ರಾಮಗಳು ಮತ್ತು ಭದ್ರಾ ಪೇಪರ್ ಮಿಲ್, ನಗರಸಭೆ ನೀರು ಸರಬರಾಜು ಕೇಂದ್ರ, ಉಜ್ಜನಿಪುರ, ಎಂಪಿಎಂ ಬಡಾವಣೆ, ದೊಡ್ಡಗೊಪ್ಪೇನಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post