ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ಬೊಮ್ಮನಕಟ್ಟೆಯಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಗೂಡ್ಸ್ ವಾಹನವನ್ನು ಕಳ್ಳತನ ಮಾಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪೇಪರ್ ಟೌನ್ ಪೊಲೀಸರು ಯಶಸ್ವಿಯಾಗಿದ್ದಾರೆ.
ಬೊಮ್ಮನಕಟ್ಟೆ ನಿವಾಸಿ ಸೈಯ್ಯದ್ ತೌಸಿಫ್ ಅವರಿಗೆ ಸೇರಿದ ಗೂಡ್ಸ್ ವಾಹನವನ್ನು ಮನೆಯ ಮುಂದೆ ನಿಲ್ಲಿಸಲಾಗಿತ್ತು. ಕಳೆದ ವಾರ ರಾತ್ರೋರಾತ್ರಿ ಕಳ್ಳರು ಕಳ್ಳತನ ಮಾಡಿದ್ದರು. ಈ ಕುರಿತಂತೆ ದೂರು ದಾಖಲಾಗಿತ್ತು.
ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೇಪರ್ ಟೌನ್ ಪೊಲೀಸರು ಆರೋಪಿಗಳಾದ ಸೊರಬದ ಅಹಮದ್ ಷಾಹಿದ್ ಹಾಗೂ ಹಿದಾಯರ್ ಷರೀಫ್ ಅವರುಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಡಿವೈಎಸ್’ಪಿ ಅವರ ಮಾರ್ಗದರ್ಶನದಲ್ಲಿ ಭದ್ರಾವತಿ ಗ್ರಾಮಾಂತರ ವೃತ್ತದ ಸಿಪಿಐ ನೇತೃತ್ವದಲ್ಲಿ ಪೇಪರ್ ಟೌನ್ ಠಾಣೆ ಪಿಎಸ್’ಐ ಹಾಗೂ ಸಿಬ್ಬಂದಿಗಳ ತಂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post