ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನಾಡಹಬ್ಬ ದಸರಾ Dasara ಅಂಗವಾಗಿ ನಗರಸಭೆ ವತಿಯಿಂದ ಅ.17ರಿಂದ 19 ರವರೆಗೆ 3 ದಿನಗಳ ದಸರಾ ಕ್ರೀಡಾಕೂಟ ಹಳೇನಗರದ ಕನಕ ಮಂಟಪ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.
ಪುರುಷರಿಗೆ ಕ್ರಿಕೆಟ್, ಕಬ್ಬಡಿ, ಕುಸ್ತಿ, ಹಗ್ಗ-ಜಗ್ಗಾಟ ಮತ್ತು ಮಹಿಳೆಯರಿಗೆ ಹಗ್ಗ-ಜಗ್ಗಾಟ, ಗುಂಡು ಎಸೆತ, ಟೈರ್ & ಸ್ಟಿಕ್ ಮತ್ತು ಲೆಮೆನ್ ಇನ್ ಸ್ಪೂನ್ ಸ್ಪರ್ಧೆಗಳು ನಡೆಯಲಿವೆ.
ಅ.17ರಂದು ಬೆಳಿಗ್ಗೆ9:30ಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಕ್ರೀಡಾಕೂಟ ಉದ್ಘಾಟಿಸಲಿದ್ದು, ನಗರಸಭೆ ಅಧ್ಯಕ್ಷೆ ಶೃತಿ ವಸಂತಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ದಸರಾ ಕ್ರೀಡಾ ಸಮಿತಿ ಅಧ್ಯಕ್ಷ ಚನ್ನಪ್ಪ, ವಿವಿಧ ಸಮಿತಿಗಳ ಅಧ್ಯಕ್ಷರು, ಸದಸ್ಯರು, ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿರುವರು.
Also read: ಶಿವಮೊಗ್ಗದಲ್ಲಿ ವಿಮಾನ ಲ್ಯಾಂಡ್ ತಡವಾಗಿದ್ದೇಕೆ? ಆಗಸದಲ್ಲೇ ಕೆಲವು ಕಾಲ ಹಾರಾಡಿದ್ದೇಕೆ? ಆಗಿದ್ದೇನು?
ಕ್ರೀಡಾಕೂಟದಲ್ಲಿ ಭಾಗವಹಿಸಲಿಚ್ಛಿಸುವವರು, ನೋಂದಾಯಿತ ಸಂಘ-ಸಂಸ್ಥೆಗಳು ಅ.13ರ ಸಂಜೆ 5 ಗಂಟೆಯೊಳಗೆ ಡಿ.ಎಸ್ ಹೇಮಂತಕುಮಾರ್, ಮೊ: 9481970265 ಅಥವಾ ಎಂ.ಎಸ್ ಬಸವರಾಜು, ಮೊ: 77600577166 ಅವರನ್ನು ಸಂಪರ್ಕಿಸಿ ಹೆಸರು ನೋಂದಾಯಿಸಬಹುದಾಗಿದೆ ಎಂದು ದಸರಾ ಕ್ರೀಡಾ ಸಮಿತಿ ಅಧ್ಯಕ್ಷ ಚನ್ನಪ್ಪ, ಕಾರ್ಯದರ್ಶಿ ಎಂ. ಸುವಾಸಿನಿ ಕೋರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post