ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಮಾಧವಾಚಾರ್ ಸರ್ಕಲ್ ಬಳಿಯಲ್ಲಿ ಹಳೇಸೇತುವೆ ಮೇಲೆ ಇಂದು ಮುಂಜಾನೆ ಸಂಚಾರ ಬಂದ್ ಮಾಡಿದ್ದ ಹಿನ್ನೆಲೆಯಲ್ಲಿ ಹೊಸ ಸೇತುವೆ, ಬಿಎಚ್ ರಸ್ತೆಗಳಲ್ಲಿ ಅರ್ಧಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಹೊಸ ಸೇತುವೆ ಮೇಲೆ ಡಾಂಬರೀಕರಣ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಸಂಚಾರವನ್ನು ನಿರ್ಬಂಧಿಸಲಾಗಿತ್ತು. ಹೀಗಾಗಿ, ಎಲ್ಲ ವಾಹನಗಳನ್ನು ಹೊಸ ಸೇತುವೆ ಮಾರ್ಗದ ಮೂಲಕ ಸಂಚರಿಸುವಂತೆ ಪೊಲೀಸರು ಸೂಚಿಸಿದ್ದರು. ಹಳೇ ಸೇತುವೆ ಮೇಲೆ ಸಂಪೂರ್ಣ ಸಂಚಾರ ನಿರ್ಬಂಧವಾಗಿದ್ದ ಪರಿಣಾಮ ಹೊಸ ಸೇತುವೆ ರಸ್ತೆ ಹಾಗೂ ಸೇತುವೆ ಮೇಲೆ ಮಿತಿ ಮೀರಿದ ವಾಹನ ದಟ್ಟಣೆ ಉಂಟಾಗಿತ್ತು.
ಶಾಲಾ, ಕಾಲೇಜು ಹಾಗೂ ಕಚೇರಿಗಳಿಗೆ ಸಾರ್ವಜನಿಕರು ತೆರಳುವ ಸಮಯವಾದ್ದರಿಂದ ತುಸು ಹೆಚ್ಚು ವಾಹನ ದಟ್ಟಣೆ ಉಂಟಾಗಿತ್ತು. ಅಲ್ಲದೇ, ಹಳೇ ಸೇತುವೆ ಮೇಲೆ ಸಂಚಾರ ನಿರ್ಬಂಧದ ಮಾಹಿತಿಯನ್ನು ಮುಂಚಿತವಾಗಿಯೇ ಸಾರ್ವಜನಿಕರಿಗೆ ತಿಳಿಸದೇ ಇದ್ದ ಕಾರಣ, ವಾಹನ ಸವಾರರಲ್ಲಿ ಗೊಂದಲ ಉಂಟಾಗಿತ್ತು.
ಇನ್ನು, ಎಲ್ಲ ವಾಹನಗಳೂ ಹೊಸ ಸೇತುವೆ ಮಾರ್ಗದಲ್ಲೇ ಸಂಚರಿಸಬೇಕಿದ್ದ ಹಿನ್ನೆಲೆಯಲ್ಲಿ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಪರಿಣಾಮವಾಗಿ ಕಚೇರಿಗಳಿಗೆ ತೆರಳಬೇಕಿದ್ದ ಸಿಬ್ಬಂದಿಗಳಿಗೆ ಹಾಗೂ ಸಾರ್ವಜನಿಕರಿಗೆ ಕೊಂಚ ತೊಂದರೆಯಾಗಿತ್ತು. ಆನಂತರ ಸ್ಥಳಕ್ಕೆ ಆಗಮಿಸಿದ ಟ್ರಾಫಿಕ್ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post