ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನವೆಂಬರ್ 4 ಹಾಗೂ 5ರಂದು ನಗರದಲ್ಲಿ ವಿಐಎಸ್’ಎಲ್ #VISL ಶತಮಾನೋತ್ಸವ ಆಚರಣೆ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರಮೋದಿ #NarendraModi ಅವರನ್ನು ಕರೆತರುವ ಪ್ರಯತ್ನ ನಡೆಯುತ್ತಿದೆ ಎಂದು ಹಿರಿಯ ನಟ ದೊಡ್ಡಣ್ಣ #ActorDoddanna ಹೇಳಿದ್ದಾರೆ.
ಜನ್ನಾಪುರದ ಮಲ್ಲೇಶ್ವರ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ಮೋಕ್ಷಗುಂಡಂ ವಿಶ್ವೇಶ್ವರಯ್ಯನವರ #SirMVishweshwaraiah 163ನೆಯ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಎರಡು ದಿನಗಳ ಕಾಲ ಅದ್ದೂರಿಯಾಗಿ ಶತಮಾನೋತ್ಸವ ಕಾರ್ಯಕ್ರಮವನ್ನು ಆಚರಣೆ ಮಾಡಲು ಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರದ ಸಚಿವರನ್ನು ಕರೆತರಲು ಪ್ರಯತ್ನ ಮಾಡಲಾಗುತ್ತಿದೆ ಎಂದರು.
ಶತಮಾನೋತ್ಸವ ಕಾರ್ಯಕ್ರಮವನ್ನು ಐತಿಹಾಸಿಕವಾಗಿಸಲು ಚಿಂತಿಸಲಾಗಿದ್ದು, ಇದರ ಯಶಸ್ಸಿಗೆ ಪ್ರತಿಯೊಬ್ಬರ ಸಹಕಾರ ಅವಶ್ಯವಾಗಿದೆ ಎಂದು ಮನವಿ ಮಾಡಿದರು.
ತಾವು ಹಿಂದೆ ವಿಐಎಸ್’ಎಲ್ ಕಾರ್ಖಾನೆಯಲ್ಲಿ ವೃತ್ತಿ ನಿರ್ವಹಿಸಿದ ಹಾಗೂ ಭದ್ರಾವತಿಯೊಂದಿಗಿನ ತಮ್ಮ ಅನುಬಂಧದ ಎಳೆಗಳಲ್ಲಿ ದೊಡ್ಡಣ್ಣ ಹಂಚಿಕೊಂಡರು.
Discussion about this post