ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ವಿಐಎಸ್‍ಎಲ್ ಉಳಿಸಲು ಆಗ್ರಹಿಸಿ ಕಾರ್ಮಿಕರು ಕಾರ್ಖಾನೆ ಮುಂದೆ ಹೋರಾಟ ನಡೆಸುತ್ತಿದ್ದು, ಕಾಂಗ್ರೆಸ್ ಮುಖಂಡರು ತಮ್ಮ ಬೆಂಬಲ ನೀಡಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು.
ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ವಿಐಎಸ್‍ಎಲ್‍ನ್ನು ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ. ಅದನ್ನು ಪುನಶ್ಚೇತನಗೊಳಿಸುತ್ತೇವೆ. ಈಗಾಗಲೇ ಕಾಂಗ್ರೆಸ್ ಮುಖಂಡರು ಈ ಬಗ್ಗೆ ಭರವಸೆ ನೀಡಿದ್ದಾರೆ ಮತ್ತು ಕಾಂಗ್ರೆಸ್ ಪ್ರಣಾಳಿಕೆಯಲ್ಲೂ ಈ ವಿಷಯ ಸೇರಿಸಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಕಾರ್ಖಾನೆಯ ಪುನಶ್ಚೇತನಕ್ಕಾಗಿ ಶ್ರಮಿಸಿದ್ದಾರೆ. ರಾಜೀವ್‍ಗಾಂಧಿಯವರು ಇದನ್ನು ಸೇಲ್ ಅಥಾರಿಟಿಗೆ ನೀಡಿದ್ದರೂ ಮಲ್ಲಿಕಾರ್ಜುನ ಖರ್ಗೆ ಹಾಗೂ ವೀರಪ್ಪಮೊಯ್ಲಿಯವರು ಮುಖ್ಯಮಂತ್ರಿಯಾಗಿದ್ದಾಗ ಈ ಕಾರ್ಖಾನೆಯನ್ನು ಖಾಸಗೀಕರಣ ಮಾಡಲು ಬಿಡಲಿಲ್ಲ. ಈಗಲೂ ಕೂಡ ನಾವು ನಿಮ್ಮೊಂದಿಗಿದ್ದೇವೆ. ಜಿಲ್ಲೆಯ ಮುಖುಟವಾದ ಕಾರ್ಖಾನೆಯನ್ನು ಮುಚ್ಚಲು ಬಿಡುವುದಿಲ್ಲ. ಕಾರ್ಮಿಕರು ಬೀದಿ ಪಾಲಾಗುವುದನ್ನು ಕಾಂಗ್ರೆಸ್ ಖಂಡಿಸುತ್ತದೆ ಎಂದು ಕಾಂಗ್ರೆಸ್ ಮುಖಂಡರು ಕಾರ್ಮಿಕರಿಗೆ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ಎನ್ ರಮೇಶ್. ವಿಧಾನ ಪರಿಷತ್ ಸದಸ್ಯರಾದ ಆರ್ ಪ್ರಸನ್ ಕುಮಾರ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಹೆಚ್ ಪಿ ಗಿರೀಶ್ , ಪ್ರಚಾರ ಸಮಿತಿ ರಾಜ್ಯ ಸಂಯೋಜಕ ಎಸ್ ಪಿ ದಿನೇಶ್, ಹಿಂದುಳಿದ ವರ್ಗಗಳ ಅಧ್ಯಕ್ಷ ಇಕ್ಕೇರಿ ರಮೇಶ್ , ಭದ್ರಾವತಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರೇಗೌಡ, ಪ್ರಮುಖರಾದ ಶಿವಾನಂದ, ಮಾರ್ಟಿಸ್ ಮಣಿ ಶೇಖರ್, ಭದ್ರಾವತಿ ಕಾಂಗ್ರೆಸ್ ನ ಅಧ್ಯಕ್ಷರುಗಳಾದ ಅಫ್ತಾಬ್ ವಿನೋದ್ ಕುಮಾರ್ ಕಾರ್ಮಿಕ ಸಂಘಟನೆ ಅಧ್ಯಕ್ಷ ಸುರೇಶ್ , ಕಾರ್ಮಿಕ ಮುಖಂಡರುಗಳಾದ ರಾಕೇಶ್ ಗಂಗಾಧರ್ ಹಾಗೂ ಇನ್ನಿತರರು ಇದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Discussion about this post