ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ವಿಐಎಸ್’ಪಿ 103ನೆಯ ಸ್ಥಾಪನೆಯ ವರ್ಷದ ಅಂಗವಾಗಿ ಸ್ಥಾಪಕರ ದಿನವನ್ನು ಆಚರಿಸಲಾಯಿತು.
ಇಂದು ಮುಂಜಾನೆ ನಡೆದ ಕಾರ್ಯಕ್ರಮದಲ್ಲಿ ಅತ್ಯುತ್ತಮ ಇಂಜಿನೀಯರ್, ರಾಜನೀತಿಜ್ಞ ಸರ್.ಎಂ. ವಿಶ್ವೇಶ್ವರಯ್ಯನವರ ಪ್ರತಿಮೆಗೆ ವಿಐಎಸ್’ಪಿ ಸಮುದಾಯದ ಪ್ರಮುಖರು ಮಾಲಾರ್ಪಣೆ ಮಾಡಿ ಗೌರವ ವಂದನೆ ಸಲ್ಲಿಸಿದರು.
ಮುಖ್ಯ ಮಹಾಪ್ರಬಂಧಕ(ಸ್ಥಾವರ), ಆಕ್ಟಿಂಗ್ ಕಾರ್ಯಪಾಲಕ ನಿರ್ದೇಶಕರಾದ ಸುರಜೀತ್ ಮಿಶ್ರಾ, ಮಹಾಪ್ರಬಂಧಕ ಪ್ರಭಾರಿ(ಸಿಬ್ಬಂದಿ ಮತ್ತು ಆಡಳಿತ) ಬಿ. ವಿಶ್ವನಾಥ್, ವಿಐಎಸ್’ಎಲ್ ಕಾರ್ಮಿಕರ ಸಂಘದ ಅಧ್ಯಕ್ಷ ಜೆ. ಜಗದೀಶ್, ವಿಐಎಸ್’ಎಲ್ ಅಧಿಕಾರಿಗಳ ಸಂಘದ ಅಧ್ಯಕ್ಷ ಎ.ಆರ್. ವೀರಣ್ಣ ಅವರುಗಳು ವಿಶ್ವೇಶ್ವರಯ್ಯನವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news








Discussion about this post