ಭದ್ರಾವತಿ: ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ದಿವ್ಯಾಂಗರಿಂದ ಮತದಾರರಿಗೆ ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸುವ ಜಾಗೃತಿ ಜಾಥಾ ಕಾರ್ಯಕ್ರಮವು ಹಳೇನಗರದ ನಗರಸಭಾ ಆವರಣದಲ್ಲಿ ನಡೆಯಿತು.
ತಹಸೀಲ್ದಾರ್ ಸೋಮಶೇಖರ್ ಮತ್ತು ತಾಪಂ ಕಾರ್ಯನಿರ್ವಹಣಾಧಿಕಾರಿ ತಮ್ಮಣ್ಣಗೌಡ ಹಸಿರು ನಿಶಾನೆ ತೋರುವ ಮೂಲಕ ಜಾಥಕ್ಕೆ ಚಾಲನೆ ನೀಡಿದರು. ಜಾಥಾವು ನಗರಸಭಾ ಆವರಣದಿಂದ ಮಾಧವಾಚಾರ್ ವೃತ್ತ, ಚನ್ನಗಿರಿ ರಸ್ತೆ, ರಂಗಪ್ಪ ವೃತ್ತ ಮೂಲಕ ತಾಲೂಕು ಕಚೇರಿಗೆ ತೆರಳಿ ಸಾರ್ವಜನಿಕರಿಗೆ ಅರಿವು ಹಾಗೂ ಜಾಗೃತಿ ಮೂಡಿಸಿ ಮತದಾರರು ಚುನಾವಣೆಯಲ್ಲಿ ಗೈರಾಗದೆ ತಮ್ಮ ಹಕ್ಕು ಚಲಾಯಿಸುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಸಿಡಿಪಿಒ ಸುರೇಶ್ ಸೇರಿದಂತೆ ಅನೇಕ ಅಧಿಕಾರಿಗಳು ಹಾಗೂ ಅಂಗನವಾಡಿ, ಸ್ತ್ರೀಶಕ್ತಿ ಸಂಘಟನೆಗಳ ಮಹಿಳೆಯರು ಸೇರಿದಂತೆ ನೂರಾರು ವಿಕಲಚೇತನರು ಭಾಗವಹಿಸಿದ್ದರು.
(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)
Discussion about this post