ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ಹಳೆನಗರದ 4ನೆಯ ವಾರ್ಡ್‌ನ ಬಹಳಷ್ಟು ಜನವಸತಿ ಪ್ರದೇಶಗಳಲ್ಲಿ ಪ್ರತಿ ಮಳೆಗಾಲದಲ್ಲಿ ನೀರು ನುಗ್ಗುವ ಆತಂಕ ಇರುವ ಹಿನ್ನೆಲೆಯಲ್ಲಿ ಇಂದು ಸ್ಥಳ ಪರಿಶೀಲನೆ ನಡೆಸಿದ ಶಾಸಕ ಬಿ.ಕೆ. ಸಂಗಮೇಶ್ವರ್, ತತಕ್ಷಣವೇ ಈ ಸಮಸ್ಯೆಯನ್ನು ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಹಳೆ ನಗರದ ಎನ್‌ಎಸ್‌ಟಿ ರಸ್ತೆ (ಪೊಲೀಸ್ ಠಾಣೆ ರಸ್ತೆ), ಕುಂಬಾರ ಬೀದಿ, ಬಸವೇಶ್ವರ ಸರ್ಕಲ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪ್ರತೀ ಮಳೆಗಾಲದಲ್ಲೂ ಮನೆ ಹಾಗೂ ಅಂಗಡಿಗಳಿಗೆ ನೀರು ನುಗ್ಗುತ್ತದೆ. ಇದರಿಂದ ಪ್ರತಿ ಮಳೆಗಾಲದಲ್ಲೂ ಇಲ್ಲಿನ ಜನರ ಸಂಕಷ್ಟ ಹೇಳತೀರದಾಗಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯರ ಮನವಿಗೆ ಸ್ಪಂದಿಸಿದ ಶಾಸಕರು ಇಂದು ನಗರಸಭೆ ಆಯುಕ್ತರು, ಇಂಜಿನಿಯರ್ ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳ ಜೊತೆಯಲ್ಲಿ ವಾರ್ಡ್ ಪ್ರದಕ್ಷಿಣೆ ನಡೆಸಿದರು. ಈ ಸಂದರ್ಭದಲ್ಲಿ ಸ್ಥಳೀಯರನ್ನು ಭೇಟಿ ಮಾಡಿ ವಾಸ್ತವ ಸಮಸ್ಯೆಗಳನ್ನು ತಿಳಿದುಕೊಂಡರು.
ತತಕ್ಷಣವೇ ಅಧಿಕಾರಿಗಳೊಂದಿಗೆ ಚರ್ಚಿಸಿ ನೀರು ನುಗ್ಗುವ ಸಮಸ್ಯೆ ಪರಿಹಾರಕ್ಕಾಗಿ ಒಳಚರಂಡಿ ಅಭಿವೃದ್ಧಿ, ಕುಡಿಯುವ ನೀರು ಸರಬರಾಜಿನಲ್ಲಿ ತೊಂದರೆ ಆಗದಂತೆ ಹಾಗೂ ವಾರ್ಡ್‌ನ ಸಮಗ್ರ ಅಭಿವೃದ್ಧಿ ಕಾರ್ಯಗಳಿಗೆ ರೂಪುರೇಷೆ ಸಿದ್ಧಪಡಿಸಿ ಅದರ ಕಾರ್ಯಗತಕ್ಕೆ ತತಕ್ಷಣವೇ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ನಗರಸಭೆ ಆಯುಕ್ತ ಪರಮೇಶ್ ಸೇರಿದಂತೆ ಹಲವು ಅಧಿಕಾರಿಗಳು ಹಾಜರಿದ್ದರು. ಇದೇವೇಳೆ ಒಳಚರಂಡಿ ಹಾಗೂ ಚರಂಡಿ ಕಾಮಗಾರಿಯನ್ನು ವೈಜ್ಞಾನಿಕವಾಗಿ ನಡೆಸುವಂತೆ ಸೂಚಿಸಿದ ಶಾಸಕರು ಭದ್ರಾ ನದಿ ದಡದಲ್ಲಿರುವ ಬೃಹತ್ ಚರಂಡಿ ಕಾಲುವೆ ಪ್ರದೇಶದಲ್ಲಿ ಖುದ್ದು ಇಳಿದು ಪರಿಶೀಲನೆ ನಡೆಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post