ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಸಂಪೂರ್ಣ ವಿಶ್ವಾಸವಿದ್ದು, ನಗರದ ವಿಐಎಸ್ಎಲ್ ಮತ್ತು ಎಂಪಿಎಂ VISL-MPM ಎರಡು ಕಾರ್ಖಾನೆಗಳನ್ನು ಹೇಗಾದರೂ ಮಾಡಿ ಉಳಿಸಿಕೊಳ್ಳಲಾಗುವುದು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ D K Shivakumar ಹೇಳಿದರು.
ಅವರು ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ಈ ಬಾರಿ ವ್ಯಾಪಕ ಜನ ಬೆಂಬಲ ವ್ಯಕ್ತವಾಗುತ್ತಿದೆ ಸುಮಾರು 150 ಸ್ಥಾನಗಳಲ್ಲಿ ಗೆಲುವು ಸಾಧಿಸುವ ವಿಶ್ವಾಸವಿದೆ ಈ ಹಿಂದೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ವಿಐಎಸ್ಎಲ್ ಕಾರ್ಖಾನೆ ಪುನಶ್ಚೇತನಗೊಳಿಸುವುದಾಗಿ ಬಿ.ಎಸ್ ಯಡಿಯೂರಪ್ಪನವರು ಶಿವಮೊಗ್ಗ ಜಿಲ್ಲೆಯ ಜನರಿಗೆ ಭರವಸೆ ನೀಡಿದ್ದರು. ಆದರೆ ಅವರು ತಮ್ಮ ಮಾತನ್ನು ಉಳಿಸಿಕೊಂಡಿಲ್ಲ. ಹಿನ್ನೆಲೆಯಲ್ಲಿ ಅವರಿಗೆ ಈ ಬಾರಿ ಜಿಲ್ಲೆಯಲ್ಲಿ ಮತ ಕೇಳುವ ನೈತಿಕತೆ ಇಲ್ಲ ಎಂದರು.
ಶಾಸಕರಾದ ಬಿ.ಕೆ ಸಂಗಮೇಶ್ವರ, ಎನ್.ಎ ಹ್ಯಾರಿಸ್, ಸಲೀಂ ಅಹಮದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Also read: ಚಿಕ್ಕಪ್ಪ ಚಲಾಯಿಸುತ್ತಿದ್ದ ಟ್ರಾಕ್ಟರ್’ಗೆ ಸಿಲುಕಿ ಏಳು ವರ್ಷದ ಬಾಲಕ ಸಾವು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post