ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಅಸಖ್ಯಾಂತ ಮಂದಿಗೆ ಉದ್ಯೋಗ, ಜೀವನ ನೀಡಿದ ವಿಐಎಸ್’ಎಲ್ #VISL ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ ಎಂದು ಲೋಕಸಭಾ ಚುಣಾವಣೆಯ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ #GeethaShivarajkumar ಭರವಸೆ ನೀಡಿದರು.
ತಾಲ್ಲೂಕಿನ ಹಿರಿಯೂರು ಜಿಪಂ ವ್ಯಾಪ್ತಿಯ ಅಂತರಗಂಗೆ, ಬಾರಂದೂರು, ಕಾಂಗ್ರೆಸ್ #Congress ಮುಖಂಡರು ಮತ್ತು ಕಾರ್ಯಕರ್ತರ ಬೃಹತ್ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್. ಕುಮಾರ್ ಮಾತನಾಡಿ, ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿ.ವೈ. ರಾಘವೇಂದ್ರ ಅವರ ಕೊಡುಗೆ ಶೂನ್ಯ. ಭದ್ರಾವತಿ ತಾಲೂಕಿಗೆ ಮಲತಾಯಿ ಧೋರಣೆ ಮಾಡಿದ್ದಾರೆ. ಚುನಾವಣೆ ಸಮಯದಲ್ಲಿ ಮಾತ್ರ ರಾಘವೇಂದ್ರ ಮತದಾರರ ಎದುರು ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ. ಇದಕ್ಕೆ ಜನರು ಕರಗಬಾರದು ಎಂದರು.

ಕರ್ನಾಟಕ ರಾಜ್ಯ ಸಾಂಬಾರು ಪದಾರ್ಥ ಅಭಿವೃದ್ದಿ ಮಂಡಳಿಯ ಅಧ್ಯಕ್ಷೆ ಜಿ. ಪಲ್ಲವಿ, ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷೆ ಬಲ್ಕೀಷ್ ಬಾನು, ಲೋಕಸಭಾ ಚುನಾವಣೆ ಜಿಲ್ಲಾ ಉಸ್ತುವಾರಿ ಅನಿಲ್ ಕುಮಾರ್ ತಡಕಲ್, ನಟ ಶಿವರಾಜಕುಮಾರ್, ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಮಣಿಶಂಕರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎನ್. ರಮೇಶ್, ಕೆಪಿಸಿಸಿ ಸದಸ್ಯ ವೈ.ಎಚ್. ನಾಗರಾಜ, ನಗರ ಸಭೆ ಸದಸ್ಯ ಬಿ.ಕೆ. ಮೋಹನ್, ಕಾಂಗ್ರೆಸ್ ಮುಖಂಡ ಬಿ.ಎಸ್. ಗಣೇಶ್, ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಷಡಾಕ್ಷರಿ ಸೇರಿದಂತೆ ನೂರಾರು ಕಾರ್ಯಕರ್ತರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post