ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಭದ್ರಾವತಿ ಕ್ಷೇತ್ರವನ್ನು ನಾನು ಈ ಬಾರಿ ಪ್ರತಿಷ್ಠೆಯಾಗಿ ಸ್ವೀಕರಿಸಿದ್ದು, ಖುದ್ಧು ಮುತುವರ್ಜಿ ವಹಿಸಿ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸುವುದಾಗಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ಶಿವಮೊಗ್ಗದಲ್ಲಿ ತಮ್ಮನ್ನು ಭೇಟಿಯಾದ ಭದ್ರಾವತಿ ಬಿಜೆಪಿ ಅಭ್ಯರ್ಥಿ ಮಂಗೋಟೆ ರುದ್ರೇಶ್ ಅವರಿಗೆ ಅಭಯ ನೀಡಿ ಅವರು ಮಾತನಾಡಿದರು.
ರುದ್ರೇಶ್ ಗೆಲುವಿಗಾಗಿ ನಾನೇ ಅಖಾಡಕ್ಕೆ ಇಳಿದು, ಕಾರ್ಯತಂತ್ರ ರೂಪಿಸಿ ಗೆಲ್ಲಿಸುತ್ತೇನೆ. ರುದ್ರೇಶ್ ಅವರಿಗೆ ಟಿಕೇಟ್ ನೀಡಿರುವುದು ನಮ್ಮ ಕಾರ್ಯಕರ್ತರಲ್ಲಿ ಸಂತೋಷ ಮೂಡಿಸಿದೆ. ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಲು ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















