ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ತಾಲೂಕಿನ ಮಸರಹಳ್ಳಿ ರೈಲ್ವೆ ಹಳಿ ಬದಿಯ ಮೇಲೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ರೈಲು ಡಿಕ್ಕಿಯಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಶಿವಮೊಗ್ಗ-ಮೈಸೂರು ರೈಲು ಭದ್ರಾವತಿ ಮಾರ್ಗವಾಗಿ ಸಾಗುತ್ತಿದ್ದಾಗ ಮೊಬೈಲ್ ನಲ್ಲಿ ಸಂಭಾಷಣೆಯಲ್ಲಿದ್ದ ಮಹಿಳೆಗೆ ರೈಲು ಬರುವುದು ಗಮನಕ್ಕೆ ಬಾರದೆ ತಲೆಯ ಎಡಬದಿಯಲ್ಲಿ ರೈಲು ಬಡಿದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ಭದ್ರಾವತಿ ರೈಲ್ವೆ ಪೋಲಿಸರು ಭೇಟಿ ನೀಡಿ, ಶವವನ್ನು ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಮೃತ ಮಹಿಳೆಯ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
Also read: ಖಾಸಗಿ ಬಸ್ ಪಲ್ಟಿ: ಇಬ್ಬರು ಸಾವು, 15ಕ್ಕೂ ಹೆಚ್ಚು ಜನರಿಗೆ ಗಾಯ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post