ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ಮಹಿಳೆಯರು ಗರ್ಭಕೋಶದ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವ ಅವಶ್ಯಕತೆ ಇದೆ ಎಂದು ಶಿವಮೊಗ್ಗ ಉಷಾ ನರ್ಸಿಂಗ್ ಹೋಂ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಡಾ. ರಕ್ಷಾ ಯು. ರಾವ್ ಅಭಿಪ್ರಾಯಪಟ್ಟರು.
ಹಳೇನಗರದ ಮಹಿಳಾ ಸೇವಾ ಸಮಾಜದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವುರ, ಇತ್ತೀಚಿನ ದಿನಗಳಲ್ಲಿ ಮಹಿಳೆಯರಲ್ಲಿ ಗರ್ಭಕೋಶದ ಸಮಸ್ಯೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಇದು ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಆದ್ದರಿಂದ ಗರ್ಭಕೋಶದ ಆರೋಗ್ಯದ ಬಗ್ಗೆ ಹೆಚ್ಚಿನ ತಿಳುವಳಿಕೆ ಪಡೆದುಕೊಳ್ಳುವ ಜೊತೆಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ಪಡೆಯುವುದು ಅಗತ್ಯ ಎಂದು ಸಲಹೆ ನೀಡಿದರು.
ನಗರಸಭೆ ಪೌರಾಯುಕ್ತ ಮನೋಹರ್ ಕಾರ್ಯಕ್ರಮ ಉದ್ಘಾಟಿಸಿದರು. ಸಮಾಜದ ಅಧ್ಯಕ್ಷೆ ಹೇಮಾವತಿ ವಿಶ್ವನಾಥ್ ಅಧ್ಯಕ್ಷತೆ ವಹಿಸಿದ್ದರು.
ಸಮಾಜದ ಹಿರಿಯ ಸದಸ್ಯರಾದ ವಸುಧಾ ಮುಕುಂದ್, ರಾಧ ಕೆ. ಭಟ್, ಪುಷ್ಪ ಕೃಷ್ಣಮೂರ್ತಿ ಸೇರಿದಂತೆ ಇನ್ನಿತರರನ್ನು ಇದೇ ಸಂದರ್ಭದಲ್ಲಿಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯದರ್ಶಿ ಶೋಭ ಗಂಗರಾಜ್, ಖಜಾಂಚಿ ಜಯಂತಿ ಶೇಟ್, ಚಂದ್ರಕಲಾ ವರದರಾಜ್, ಶಕುಂತಲ ರವಿಕುಮಾರ್, ಭಾಗ್ಯ ನಿಜಗುಣ, ಶಾರದ ಶ್ರೀನಿವಾಸ್, ಕಮಲರಾಯ್ಕರ್ ಇನ್ನಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post